ಕೌಶಲ್ಯಾಭಿವೃದ್ಧಿ ಉತ್ತೇಜನಕ್ಕೆ ತಿಳುವಳಿಕೆ ಪತ್ರಕ್ಕೆ ಸಹಿ

ಕೌಶಲ್ಯಾಭಿವೃದ್ಧಿ ಉತ್ತೇಜನಕ್ಕೆ ತಿಳುವಳಿಕೆ ಪತ್ರಕ್ಕೆ ಸಹಿ
ಕೌಶಲ್ಯಾಭಿವೃದ್ಧಿ ಉತ್ತೇಜನಕ್ಕೆ ತಿಳುವಳಿಕೆ ಪತ್ರಕ್ಕೆ ಸಹಿ
Published on
ಧಾರವಾಡ: ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಮುಂಬೈನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೆಕ್ಯೂರಿಟೀಸ್ ಮಾರ್ಕೆಟ್ಸ್ (ಎನ್‌ಐಎಸ್‌ಎಂ) ನಡುವೆ ತಿಳುವಳಿಕಾ ಪತ್ರಕ್ಕೆ ಮಂಗಳವಾರ ಸಹಿ ಹಾಕಲಾಯಿತು.
ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮತ್ತು ಮುಂಬೈನ ಎನ್‌ಐಎಸ್‌ಎಂ ಪ್ರಧಾನ ವ್ಯವಸ್ಥಾಪಕ ಸಂಜೀವ ಬಜಾಜ್ ಅವರು ಸಹಿ ಹಾಕಿದರು.
ಎನ್.ಐ.ಎಸ್.ಎಂ ಪ್ರಮಾಣೀಕರಣ ಕಾರ್ಯಕ್ರಮಗಳು, ತರಬೇತಿ, ಕಾರ್ಯಾಗಾರಗಳು ಮತ್ತು ಶೈಕ್ಷಣಿಕ ಉಪಕ್ರಮಗಳ ಮೂಲಕ ಹಣಕಾಸು ಸಾಕ್ಷರತೆ, ಹಣ ಹೂಡಿಕೆದಾರರ ಜಾಗೃತಿ, ಉದ್ಯಮ-ಆಧಾರಿತ ಕೌಶಲ್ಯಾಭಿವೃದ್ಧಿ ಉತ್ತೇಜಿಸುವ ಗುರಿಯನ್ನು ಈ ಸಹಯೋಗವು ಹೊಂದಿದೆ.
ಈ ಪಾಲುದಾರಿಕೆಯು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾವಕಾಶಗಳನ್ನು ಮತ್ತು ಹಣಕಾಸು ಸೇವಾ ವಲಯದಲ್ಲಿ ಹೆಚ್ಚಿನ ಮಾನ್ಯತೆ ನೀಡುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಸಹಿ ಸಂದರ್ಭದಲ್ಲಿ ಜೆ.ಎಸ್.ಎಸ್. ಆಡಳಿತಾಽಕಾರಿ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಬಿಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಅವಿನಾಶ ಹೊಳಿಹೊಸೂರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net