minister joshi ರಾಹುಲ್​ಗೆ ಕೆಪಿಎಸ್ಸಿ ಕರ್ಮಕಾಂಡ ಕಾಣುತ್ತಿಲ್ಲ ಏಕೆ?

minister joshi  ಕೇಂದ್ರ ಸಚಿವ ಪ್ರಲ್ಹಾದ ಜೋಶಿ
minister joshi ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನೆ
  • ನೀಟ್​ ವಿವಾದ ಕುರಿತು ಸಂಸತ್​ನಲ್ಲಿ ಚರ್ಚೆಗೆ ಕೇಂದ್ರ ಸಿದ್ಧ
ಹುಬ್ಬಳ್ಳಿ: minister joshi ನೀಟ್​ ಬಗ್ಗೆ ಧ್ವನಿ ಎತ್ತುತ್ತಿರುವ ರಾಹುಲ್​ ಗಾಂಧಿ ಕರ್ನಾಟಕದ ಕೆಪಿಎಸ್ಸಿ ಕರ್ಮಕಾಂಡದ ಬಗ್ಗೆ ಏಕೆ ಮೌನ ವಹಿಸಿದ್ದಾರೆ? ಪ್ರತಿಪಕ್ಷದವರ ಇದೆಂಥ ದ್ವಿಮುಖ ನೀತಿ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ರಾಷ್ಟ್ರೀಯ ಪರೀಕ್ಷೆ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದರು.
ನೀಟ್​ ವಿವಾದ ಕುರಿತು ಸಂಸತ್ತಿನಲ್ಲಿ ಮುಕ್ತ ಹಾಗೂ ಸತ್ಯಾಧಾರಿತ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದಕ್ಕೆ ಅಖಿಲೇಶ್​ ಯಾದವ್​ ಸೇರಿ ಹಲವು ವಿಪಕ್ಷ ನಾಯಕರು ಸಮ್ಮತಿಸಿದ್ದಾರೆ. ವಿಪಕ್ಷಗಳು ರಾಜಕೀಯ ಬದಿಗೊತ್ತಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಒಟ್ಟಾಗಿ ಚರ್ಚೆಯಲ್ಲಿ ಭಾಗವಹಿಸಬೇಕೆಂದು ಜೋಶಿ ಕೋರಿದರು.
ಕರ್ನಾಟಕದಲ್ಲಿ 2.7 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಕೆಪಿಎಸ್​ಸಿ ಅಧ್ಯಕ್ಷರ ಮೇಲೆಯೇ ಭ್ರಷ್ಟಾಚಾರದ ಆರೋಪಗಳಿವೆ. ಪ್ರತಿಭಟನೆಗಿಳಿದ ಪರೀಕ್ಷಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ. ಇಷ್ಟಿದ್ದರೂ ರಾಹುಲ್​ ಅದೇಕೆ ಮೌನ ವಹಿಸಿದ್ದಾರೆ. ಕರ್ನಾಟಕದಲ್ಲಿ ಏಕೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಾಥ್​ ಕೊಡಲಿಲ್ಲ? ಎಂದು ಪ್ರಶ್ನಿಸಿದರು.
ನೀಟ್​ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವತ್ತೂ ನೆಪ ಹೇಳಿಲ್ಲ. ವ್ಯವಸ್ಥೆ ಸುಧಾರಿಸಲು ಆದ್ಯತೆ ನೀಡಿದೆ. ಈಗಾಗಲೇ 14 ಜನರನ್ನು ಬಂಧಿಸಲಾಗಿದೆ ಎಂದರು.
ರಾಜಸ್ಥಾನದಲ್ಲಿ ಮಾತ್ರ ಗೆಹ್ಲೋತ್​ ಅವರ ಅಧಿಕಾರಾವಧಿಯಲ್ಲಿ 19 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಿಯಾಂಕಾ ವಾದ್ರಾ ಅವರು ಅಂದು "ಅತ್ಯುತ್ತಮ ಪ್ರಯತ್ನದ ಹೊರತಾಗಿಯೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲ' ಎಂಬುದನ್ನು ಸ್ವತಃ ಒಪ್ಪಿಕೊಂಡಿದ್ದರು ಎಂದು ಜೋಶಿ ನೆನಪಿಸಿದ್ದಾರೆ.
ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಎಂದು ಗೊತ್ತಾದ ಕೂಡಲೇ ಸರ್ಕಾರ ಪರೀಕ್ಷೆ ರದ್ದುಗೊಳಿಸಿತು. ನಂತರ ಅತ್ಯಂತ ಪಾರದರ್ಶಕ ರೀತಿಯಲ್ಲಿ ಮರು-ನೀಟ್​ ಪರೀಕ್ಷೆ ನಡೆಸಿ ಫಲಿತಾಂಶ ಸಹ ಘೋಷಿಸಲಾಯಿತು. ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ರಚನಾತ್ಮಕ ಸಲಹೆ ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಭರವಸೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net