ಧಾರವಾಡದಲ್ಲಿ ಪ್ರತ್ಯೇಕ (Minister visit) ಪಾಲಿಕೆಗಾಗಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರರೊಂದಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಭಾನುವಾರ ಸಭೆ ನಡೆಸಿದರು. ಹೋರಾಟಗಾರ ಬಿ.ಡಿ.ಹಿರೇಮಠ, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಇತರರು ಇದ್ದರು.
Published on:
Copied
Follow Us
ಹುಬ್ಬಳ್ಳಿ: ಧಾರವಾಡದಲ್ಲಿ ಪ್ರತ್ಯೇಕ (Minister visit)ಪಾಲಿಕೆಗಾಗಿ ಸತ್ಯ ಪ್ರತಿಪಾದನ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರರೊಂದಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಭಾನುವಾರ ಸಭೆ ನಡೆಸಿದರು. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಹೋರಾಟ ಕೈ ಬಿಡುವಂತೆ ಅವರು ಮನವಿ ಮಾಡಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸಭೆ ನಡೆಯಿತು.
ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ನಿಮ್ಮ ಹೋರಾಟ ನ್ಯಾಯಯುತವಾದದ್ದು. ಈ ವಿಷಯ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕು. ರಾಜ್ಯ ಸರ್ಕಾರ ನಿಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲಿದೆ. ಹಿಂದೆಯೂ ಸರ್ಕಾರವೇ ನಿರ್ಧಾರ ಕೈಗೊಂಡಿತ್ತು. ಮುಂದೆಯೂ ಸರ್ಕಾರ ಸ್ಪಂದಿಸಲಿದೆ ಎಂದು ಸಚಿವರು ಹೇಳಿದರು.
ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಧಾರವಾಡದ ಜನತೆಯ ಆಶಯದಂತೆ ಪ್ರತ್ಯೇಕ ಪಾಲಿಕೆ ರಚನೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಮೊದಲು ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಒಪ್ಪಿಗೆ ಸೂಚಿಸಿದ್ದ ಬಿಜೆಪಿ ನಂತರ ತನ್ನ ನಿಲುವು ಬದಲಾಯಿಸಿತು. ರಾಜ್ಯ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ವಿಳಂಬ ಮಾಡಿ ಅನುಮೋದನೆ ನೀಡಿದ್ದಾರೆ ಎಂದು ವಿವರಿಸಿದರು.
ಹೋರಾಟಗಾರ ಬಿ.ಡಿ. ಹೀರೆಮಠ ಮಾತನಾಡಿ, ಹೋರಾಟದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಕರೆದು ಸೋಮವಾರ (ಜೂ. 8ರಂದು) ಸಭೆ ನಡೆಸಿ ಹೋರಾಟ ಕೈ ಬಿಡುವ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಸಕ ಎನ್. ಎಚ್. ಕೊನರಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ತಾಫ್ ಹಳ್ಳೂರ, ಅನಿಲಕುಮಾರ ಪಾಟೀಲ, ಎಂ.ಎಸ್. ಅಕ್ಕಿ, ಸಾಕೀರ ಸನದಿ, ಇತರರು ಇದ್ದರು.