ಈ ವೇಳೆ ಮಾತನಾಡಿದ ಅವರು, ಜಿಲ್ಲೆಯನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಮ್ಮ ಭಾಗದಲ್ಲಿ ಬೆಳೆ ಕಣ್ಣಿಗೆ ಎತ್ತರಕ್ಕೆ ಕಾಣುತ್ತದೆ. ಆದರೆ, ಬೆಳೆಗಳಲ್ಲಿ ಕಾಳಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚಚಿರ್ಸಲಾಗಿದೆ. ಕೃಷಿ ಕ್ಷೇತ್ರ ಇಂದು ಸಂಕಷ್ಟದಲ್ಲಿದ್ದು, ರೈತರ ಸಮಸ್ಯೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು. ರೈತರ ಪರವಾಗಿ ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ ಎಂದರು.