ಭಾರತ್​ ಜೋಡೋ'ದಿಂದ ಯುವಕರ ಸಂಘಟನೆ

ಧಾರವಾಡ ದಸರಾ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ವಿನಯ ಕುಲಕರ್ಣಿ ಮಾತನಾಡಿದರು.
ಧಾರವಾಡ ದಸರಾ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ವಿನಯ ಕುಲಕರ್ಣಿ ಮಾತನಾಡಿದರು.
Published on
ಧಾರವಾಡ: ಯುವಕರನ್ನು ಸಂಟಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಭಾರತ್​ ಜೋಡೋ ಯುವಕ ಸಂ ರಚನೆಗೆ ಅವಕಾಶ ಕಲ್ಪಿಸಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಿ ಸಂದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಶಾಸಕ ವಿನಯ ಕುಲಕಣಿರ್ ಹೇಳಿದರು.
ನಗರದ ಆರ್​.ಎನ್​. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ಧಾರವಾಡ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಾತನಾಡಿದರು. ಯುವಕರಲ್ಲಿ ಕ್ರೀಡಾ ಮನೋಭಾವ, ಸಾಮಾಜಿಕ ಬದ್ಧತೆ ಹಾಗೂ ಏಕತೆ ಬೆಳೆಸುವ ನಿಟ್ಟಿನಲ್ಲಿ ಸಂಗಳ ಚಟುವಟಿಕೆಗಳಿಗೆ ಸರ್ಕಾರದಿಂದ ಆಥಿರ್ಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕುಸ್ತಿ ಹಾಗೂ ಇತರೆ ಎಲ್ಲ ಕ್ರೀಡಾಪಟುಗಳು ಕ್ರೀಡಾ ೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ, ಕ್ರೀಡಾ ಪ್ರತಿಭೆ ಪ್ರದಶಿರ್ಸಿದರು.
ಪೊಲೀಸ್​ ವರಿಷ್ಠಾಧಿಕಾರಿ ಗುಂಜನ್​ ಆರ್ಯ, ಜಿಪಂ ಉಪ ಕಾರ್ಯದಶಿರ್ ಮಲ್ಲಿಕಾರ್ಜುನ ತೊದಲಬಾಗಿ, ಅಥ್ಲೆಟಿಕ್ಸ್​ ಅಸೋಸಿಯೇಷನ್​, ಕಬಡ್ಡಿ ಅಸೋಸಿಯೇಷನ್​, ಖೋ ಖೋ ಅಸೋಸಿಯೇಷನ್​ ಹಾಗೂ ಇತರೆ ಅಸೀಸಿಯೇಷನ್​ ಪದಾಧಿಕಾರಿಗಳು ಇದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪೂರ ಸ್ವಾಗತಿಸಿದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಕಬಡ್ಡಿ ತರಬೇತುದಾರ ರಂಗನಾಥ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net