ಉದಯನಗರದ ಅರವಿಂದ ಪಾಟೀಲ ಮೋಸಕ್ಕೊಳಗಾದವರು. ವಿವಿಧ ಟಾಸ್ಕ್ ಕೊಟ್ಟು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ವಂಚಕರು ನಂಬಿಸಿದ್ದಾರೆ. ನಂತರ ವಿವಿಧ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಅರವಿಂದ ದೂರಿನಲ್ಲಿ ವಿವರಿಸಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.