moot court ಎಲ್ಲರೂ ಕಾನೂನುಗಳನ್ನು ತಿಳಿದುಕೊಳ್ಳುವುದು ಅಗತ್ಯ

moot court ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಲ್ಪಿತ ನ್ಯಾಯಾಲಯ ಸ್ಪರ್ಧೆಯನ್ನು ನ್ಯಾಯಮೂರ್ತಿ ಅಶೋಕ ನಿಜಗಣ್ಣವರ ಉದ್ಘಾಟಿಸಿದರು. ಡಾ. ಸಿ. ಬಸವರಾಜು, ಡಾ. ರತ್ನಾ ಭರಮಗೌಡರ, ಗೀತಾ ಕೌಲಗಿ ಇದ್ದರು.
moot court ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಲ್ಪಿತ ನ್ಯಾಯಾಲಯ ಸ್ಪರ್ಧೆಯನ್ನು ನ್ಯಾಯಮೂರ್ತಿ ಅಶೋಕ ನಿಜಗಣ್ಣವರ ಉದ್ಘಾಟಿಸಿದರು. ಡಾ. ಸಿ. ಬಸವರಾಜು, ಡಾ. ರತ್ನಾ ಭರಮಗೌಡರ, ಗೀತಾ ಕೌಲಗಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾನೂನು ಶಿಕ್ಷಣ ಇಂದಿನ ಅಗತ್ಯ
  • ನ್ಯಾಯಮೂರ್ತಿ ಅಶೋಕ ನಿಜಗಣ್ಣವರ ಅಭಿಮತ
  • ಕೆಎಸ್​ಎಲ್​ಯುನಲ್ಲಿ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ
ಹುಬ್ಬಳ್ಳಿ:
ಇಲ್ಲಿಯ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಾನೂನು ಶಾಲೆ ವತಿಯಿಂದ ಶನಿವಾರ ಏರ್ಪಡಿಸಿದ್ದ 12ನೇ ರಾಷ್ಟ್ರೀಯ ಕಲ್ಪಿತ ನ್ಯಾಯಾಲಯ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಸದೃಢ ದೇಶ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದ್ದಾಗಿದೆ. ಇಂದು ತಂತ್ರಜ್ಞಾನ ಸಹ ಬಹಳಷ್ಟು ಅಭಿವೃದ್ಧಿಯಾಗಿದೆ. ಕೃತಕ ಬುದ್ಧಿಮತ್ತೆಯನ್ನು ತಪ್ಪು ಕೆಲಸಗಳಿಗೆ ಉಪಯೋಗಿಸಲಾಗುತ್ತಿದೆ. ಇದು ನಿಲ್ಲಬೇಕು ಎಂದರು.
ವಿದ್ಯಾರ್ಥಿಗಳು ಪುಸ್ತಕದ ಜ್ಞಾನದ ಜೊತೆಗೆ ಸ್ಪರ್ಧೆಗಳಿಂದ ಬಹಳಷ್ಟು ವಿಷಯಗಳನ್ನು ಅರಿತುಕೊಳ್ಳಬಹುದು. ಭಾಷಾ ಕೌಶಲ, ಸಂವಹನ ಕಲೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಬಹಳ ಮುಖ್ಯ ಎಂದರು.
ವಿಶ್ವವಿದ್ಯಾಲಯ ಆಡಳಿತ ಕುಲಸಚಿವೆ ಗೀತಾ ಕೌಲಗಿ, ಮೌಲ್ಯಮಾಪನ ಕುಲಸಚಿವೆ ಡಾ. ರತ್ನಾ ಭರಮಗೌಡರ ಉಪಸ್ಥಿತರಿದ್ದರು.
ಉಪನ್ಯಾಸಕರು, ಸಿಂಡಿಕೇಟ್​ ಸದ್ಯಸರು, ಬೋಧಕ, ಬೋಧಕೇತರ ಸಿಬ್ಬಂದಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net