ಹುಬ್ಬಳ್ಳಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ murder ಮಾಡಿರುವ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಶಾಂತಿನಗರ ಪ್ಲಾಟ್‌ನಲ್ಲಿ ನಡೆದಿದೆ.
ಫಕ್ಕೀರಪ್ಪ ಅಲಿಯಾಸ್ ಬಸು ಅಕಿವಳ್ಳಿ ಹತ್ಯೆಯಾದ ವ್ಯಕ್ತಿ. ಪ್ರಕಾಶ ಕರಶೆಟ್ಟಿ ಕೊಲೆ ಮಾಡಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಕಾಶನ ಪತ್ನಿ ಜತೆಗೆ ಫಕ್ಕೀರಪ್ಪ ಅನೈತಿಕ ಸಂಬಂಧ ಹೊಂದಿದ್ದ. ಈ ಕುರಿತು ರಾಜೀ ಪಂಚಾಯಿತಿ ಕೂಡ ಮಾಡಲಾಗಿತ್ತು. ಇದಾದ ಬಳಿಕವೂ ಮುಂದುವರಿದಿದ್ದರಿಂದ ಪ್ರಕಾಶ, ಫಕ್ಕೀರಪ್ಪನನ್ನು ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.