ನಾಗರತ್ನ ಹಳೇಮನಿ (19) ಕೊಲೆಯಾದವರು. ಶಿವರಾಜ ಹಳೇಮನಿ ಕೊಲೆಗೈದವರು. ಕಳೆದ ಫೆಬ್ರುವರಿಯಲ್ಲಿ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ-ಶಿವರಾಜ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬೆಳಗ್ಗೆ ಪತಿ-ಪತ್ನಿ ಮಧ್ಯೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದಾಗ ಶಿವರಾಜ, ನಾಗರತ್ನಗೆ ಹೆಲ್ಮೆಟ್‌ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.