(murder) ರಂಜಿತಾ ಶವ ಯಲ್ಲಾಪುರಕ್ಕೆ ರವಾನೆ

 ಬಿಗಿ ಪೊಲೀಸ್ ಬಂದೋಬಸ್ತ್ (murder)
ಬಿಗಿ ಪೊಲೀಸ್ ಬಂದೋಬಸ್ತ್ (murder)
Published on
ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ಆಶ್ರಯ ಕಾಲನಿಯಲ್ಲಿ ಶನಿವಾರ ಮುಸ್ಲಿಂ ಯುವಕನಿಂದ ಕೊಲೆಯಾದ (murder) ರಂಜಿತಾ ಬನಸೋಡೆ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಇಲ್ಲಿಯ ಕೆಎಂಸಿಆರ್‌ಐನಲ್ಲಿ ಭಾನುವಾರ ನಡೆಯಿತು. ಶವಾಗಾರ ಸೇರಿ ಇತರೆಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ತಜ್ಞ ವೈದ್ಯರ ನೇತೃತ್ವದಲ್ಲಿ ಬೆಳಗ್ಗೆ 11ರಿಂದ 12.30ರವರೆಗೆ ಶವದ ಮರಣೋತ್ತರ ಪರೀಕ್ಷೆ ನಡೆಯಿತು. ನಂತರ ರಂಜಿತಾ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ನೇತೃತ್ವದಲ್ಲಿ ಯಲ್ಲಾಪುರದ ಕಾಳಮ್ಮನಗರ ಆಶ್ರಯ ಕಾಲನಿಗೆ ಕಳುಹಿಸಿಕೊಡಲಾಯಿತು.
ಇದಕ್ಕೂ ಮೊದಲು ಹಿಂದು ಪರ ಹಾಗೂ ದಲಿತ ಪರ ಸಂಘಟನೆಗಳು ಒಗ್ಗೂಡಿ ಪ್ರತಿಭಟನೆ ನಡೆಸಿ, ಮೃತ ಮಹಿಳೆ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಶವವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡುವಂತೆ ವಿನಂತಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ಆಂಬುಲೆನ್ಸ್ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿತ್ತು.
ದಲಿತ ಮಹಿಳೆಯರಿಗೆ ರಕ್ಷಣೆ ಸಿಗುತ್ತಿಲ್ಲ. ಪದೇ ಪದೆ ಇಂಥ ಕೃತ್ಯಗಳು ರಾಜ್ಯದಲ್ಲಿ ನಡೆಯುತ್ತಿವೆ. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ರಂಜಿತಾ ಪ್ರಾರ್ಥಿವ ಶರೀರದ ಮೆರವಣಿಗೆಯನ್ನು ವಿವಿಧ ಸಂಘಟನೆಯ ನೇತೃತ್ವದಲ್ಲಿ ಕಾರವಾರ ರಸ್ತೆಯವರೆಗೆ ನಡೆಸಿ, ಯಲ್ಲಾಪುರಕ್ಕೆ ಕಳುಹಿಸಿಕೊಡಲಾಗುತ್ತಿದೆ ಎಂದು ದಲಿತ ವಿಮೋಚನಾ ಸಮಿತಿಯ ಶ್ರೀಧರ ಕಂದಗಲ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net