ಶಿಕ್ಷಣವೇ ಭವಿಷ್ಯಕ್ಕೆ (New college) ಭದ್ರ ಬುನಾದಿ

ಹುಬ್ಬಳ್ಳಿ ಬಿಡನಾಳದಲ್ಲಿ (New college) ಆರ್.ಕೆ. ಪಾಟೀಲ ಸರಕಾರಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.
ಹುಬ್ಬಳ್ಳಿ ಬಿಡನಾಳದಲ್ಲಿ (New college) ಆರ್.ಕೆ. ಪಾಟೀಲ ಸರಕಾರಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.
Published on

ಶಿಕ್ಷಣ ಇಂದು

(New college)

ದುಬಾರಿಯಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡುವುದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನಗರದ ಬಿಡನಾಳದಲ್ಲಿ ನೂತನವಾಗಿ ಆರಂಭವಾಗಿರುವ ಆರ್.ಕೆ. ಪಾಟೀಲ ಸರಕಾರಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವಿದ್ಯಾರ್ಥಿ ಆರ್ಥಿಕ ಕಾರಣಗಳಿಂದ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ದೂರದೃಷ್ಟಿಯಿಂದ ಸರ್ಕಾರ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಿಡನಾಳದಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೊಂದಿಗೆ ಕಾಲೇಜು ಮಂಜೂರು ಮಾಡಲಾಗಿದ್ದು, ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದು ಸಂತಸದ ಸಂಗತಿ ಎಂದರು.
ಮೊಬೈಲ್ ಫೋನ್ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಬಲ್ಲ ಸಾಧನವಾಗಿದೆ. ಆದರೆ, ಅದರ ಅತಿಯಾದ ಹಾಗೂ ದುರ್ಬಳಕೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಬಹುದು. ಮೊಬೈಲ್ ಫೋನ್ ವ್ಯಸನಕ್ಕೆ ಮಕ್ಕಳು ಬಲಿಯಾಗದಂತೆ ಪಾಲಕರು ಹಾಗೂ ಶಿಕ್ಷಕರು ಎಚ್ಚರಿಕೆ ವಹಿಸಬೇಕು ಎಂದು ಅಬ್ಬಯ್ಯ ಸಲಹೆ ನೀಡಿದರು.

ಪದವಿ ಪೂರ್ವ ಉಪ ನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ ಮಾತನಾಡಿದರು. ಪ್ರಾಚಾರ್ಯ ಬಿ.ಎನ್. ನವಲಗುಂದ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಮಾಜಿ ಸದಸ್ಯ ಮೋಹನ ಅಸುಂಡಿ, ಮುಖ್ಯೋಪಾಧ್ಯಾಯಕಿ ಲಲಿತಾ ಕಳಲಕೊಂಡ, ಮುಖ್ಯೋಪಾಧ್ಯಾಯಕ ಮಂಜುನಾಥ ರನ್ನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net