ಸ್ಥಾಯಿ ಸಮಿತಿ (hdmc standing committe) ನೂತನ ಅಧ್ಯಕ್ಷರಾಯ್ಕೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ (standing committe) ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮೀನಾ ವಂಟಮುರಿ, ಮಹಾದೇವಪ್ಪ ನರಗುಂದ, ಶೀಲಾ ಕಾಟ್ಕರ್, ಸುರೇಶ ಬೇದರೆ ಅವರನ್ನು ಮೇಯರ್ ಜ್ಯೋತಿ ಪಾಟೀಲ್ ಅಭಿನಂದಿಸಿದರು.
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ (standing committe) ನಾಲ್ಕು ಸ್ಥಾಯಿ ಸಮಿತಿಗಳಿಗೆ ಬುಧವಾರ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಮೀನಾಕ್ಷಿ ವಂಟಮುರಿ ಆಯ್ಕೆಯಾದರು.
ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಮಹಾದೇವಪ್ಪ ನರಗುಂದ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗೆ ಶೀಲಾ ಕಾಟ್ಕರ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ಸುರೇಶ ಬೇದರೆ ಇವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಮೇಯರ್ ಜ್ಯೋತಿ ಪಾಟೀಲ ಅಭಿನಂದಿಸಿದರು.