noolvi school ನೂಲ್ವಿ ಗ್ರಾಮಸ್ಥರು, ಪಾಲಕರ ಪ್ರತಿಭಟನೆ

ಶಾಲೆ ಮುಚ್ಚುತ್ತಿರುವುದನ್ನು ಖಂಡಿಸಿ noolvi school ನೂಲ್ವಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಪಾಲಕರು ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಶಾಲೆ ಮುಚ್ಚುತ್ತಿರುವುದನ್ನು ಖಂಡಿಸಿ noolvi school ನೂಲ್ವಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಪಾಲಕರು ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Published on
ಹುಬ್ಬಳ್ಳಿ: ಶಾಲೆ noolvi school ಮುಚ್ಚುತ್ತಿರುವುದನ್ನು ಕೈಬಿಡಬೇಕು ಹಾಗೂ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ರದ್ದುಪಡಿಸಲು ಆಗ್ರಹಿಸಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಪಾಲಕರು ಎಐಡಿಎಸ್‌ಒ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಶರಣಬಸವ ಗೋನವಾರ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆಯ ಭಾಗವಾಗಿ ಅದರಗುಂಚಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ನೂಲ್ವಿಯ ಗಂಡು ಮಕ್ಕಳ ಸರ್ಕಾರಿ ಶಾಲೆ, ಹೆಣ್ಣು ಮಕ್ಕಳ ಸರ್ಕಾರಿ ಶಾಲೆ, ಸರ್ಕಾರಿ ಉರ್ದು ಶಾಲೆ, ಮತ್ತು ಪ್ಲಾಟ್‌ನ ಸರ್ಕಾರಿ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. ಈ ಮೂಲಕ ಕೂಲಿ ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ಧಾರವಾಡ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಶಾಲೆಯನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದೆಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್‌ಡಿಎಂಸಿ ತಲೆಮೇಲೆ ಹೊರಿಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತಿದೆ. ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಪ್ರತಿಭಟನೆಯ ಕೊನೆಯಲ್ಲಿ ನೂಲ್ವಿ ಸರ್ಕಾರಿ ಶಾಲೆಯನ್ನು ಉಳಿಸುವ ಹೋರಾಟಕ್ಕಾಗಿ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿ ರಚಿಸಲಾಯಿತು.
ಗ್ರಾಮಸ್ಥರಾದ ದೀಪಾ, ಶಿವಕುಮಾರ, ದ್ಯಾಮವ್ವ, ರೇಷ್ಮಾ, ಮಂಜುಳಾ, ಉಸ್ಮಾನ್, ರಾಕೇಶ, ನಸ್ರೀನ್, ಸಾರ್ವಜನಿಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net