nsui protest ಹುಬ್ಬಳ್ಳಿಯ ಕಿಮ್ಸ್ ಗೇಟ್ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಎನ್ಎಸ್ಯುಐ ಕಾರ್ಯಕರ್ತರು ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆಕ್ರೋಶ
ಹಲವು ಕಾರ್ಯಕರ್ತರ ಬಂಧನ, ಬಿಡುಗಡೆ
ಹುಬ್ಬಳ್ಳಿ: nsui protest ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಗರದ ಕಿಮ್ಸ್ ಗೇಟ್ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನ್ಯಾಷನಲ್ ಸ್ಟುಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ, ಸಚಿವರ ವಿರುದ್ಧ ಘೋಷಣೆ ಕೂಗಿದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ದಾಟಿ ಬರಲು ಯತ್ನಿಸಿದ ಕಾರ್ಯಕರ್ತರು ಹಾಗೂ ಮುಖಂಡರನ್ನು ಬಂಧಿಸಲಾಯಿತು.
ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ಪ್ರತಿಕೃತಿ ದಹನ ಮಾಡಲು ಮುಂದಾದಾಗ ಪೊಲೀಸರು ತಡೆದರು. ಟೈರ್ಗೆ ಹಚ್ಚಿದ್ದ ಬೆಂಕಿಯನ್ನು ಕೂಡಲೇ ನಂದಿಸಲಾಯಿತು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ದೇಶಾದ್ಯಂತ ಸುಮಾರು 21 ವಿದ್ಯಾಥಿರ್ಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹೊಣೆ ಹೊತ್ತು ಪ್ರಧಾನಿ ಹಾಗೂ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ್, ಎನ್ಎಸ್ಯುಐ ಅಧ್ಯಕ್ಷ ಸೈಫುಲ್ಲಾ ಯರಗಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಜೀವ ಕಳೆದುಕೊಂಡ ವಿದ್ಯಾಥಿರ್ಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ವಿದ್ಯಾರ್ಥಿಗಳು ಹಾಗೂ ಮುಖಂಡರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ತಳ್ಳಾಟ ನೂಕಾಟ
ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಪ್ರತಿಕೃತಿ ದಹನ ಮಾಡಲು ಹಾಗೂ ಬ್ಯಾರಿಕೇಡ್ ದಾಟಿ ಹೊರ ಬರಲು ತೀವ್ರ ಯತ್ನ ನಡೆಸಿದರು. ಪೊಲೀಸರು ಬಲ ಪ್ರಯೋಗಿಸಿದಾಗ ತಳ್ಳಾಟ, ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಸುಮಾರು ಒಂದು ತಾಸು ಪ್ರತಿಭಟನೆ ನಡೆಸಿದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಪಾಲಿಕೆ ಸದಸ್ಯರಾದ ಸುವರ್ಣ ಕಲ್ಲಕುಂಟ್ಲ, ಸಂದಿಲಕುಮಾರ್, ಇಕ್ಬಾಲ್ ನವಲೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ್, ವಿಶಾಲ ಅಬ್ಬಯ್ಯ, ಸಾದಿಕ್ ಯಕ್ಕುಂಡಿ, ಮಂಜುನಾಥ ಉಪ್ಪಾರ, ವೀರೇಶಯ್ಯ ಕಡಕೋಳಮಠ.