ಹುಬ್ಬಳ್ಳಿ: ಸರ್ವೇ ನಡೆಸಿ (nwksrtc) ಅಪಘಾತ ಕಪ್ಪು ಸ್ಥಳ ಗುರುತಿಸಿದ್ದು, ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
ಇಲ್ಲಿಯ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು, ಸಂಸ್ಥೆ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ವಾಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಸಂಸ್ಥೆಯಿಂದ ಸರ್ವೇ ನಡೆಸಿ ಗುರುತಿಸಲಾದ ಅಪಘಾತದ ಕಪ್ಪು ಸ್ಥಳಗಳ ಮಾಹಿತಿ ನೀಡಿ ಚರ್ಚಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹನುಮನ್ನವರ, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಠೋಡ ಇತರರು ಉಪಸ್ಥಿತರಿದ್ದರು.