ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು

ಕವಿವಿ ಮಾಧ್ಯಮ ಸಂವಾದದಲ್ಲಿ `ಮಾಧ್ಯಮ ಕಾನೂನುಗಳು' ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.
ಕವಿವಿ ಮಾಧ್ಯಮ ಸಂವಾದದಲ್ಲಿ `ಮಾಧ್ಯಮ ಕಾನೂನುಗಳು' ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.
Published on
ಧಾರವಾಡ: ಮಾಧ್ಯಮ ಕ್ಷೇತ್ರಕ್ಕೆ ಬರುವವರು ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಹಿರಿಯ ಪತ್ರಕರ್ತ ಅರುಣ ಕುಮಾರ ಹಬ್ಬು ಅಭಿಪ್ರಾಯಪಟ್ಟರು.
ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಹನ ಕೂಟದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ಪತ್ರಿಕೋದ್ಯಮ ಶಿಕ್ಷಕರಿಗೆ ಸನ್ಮಾನ ಹಾಗೂ 'ಮಾಧ್ಯಮ ಮತ್ತು ಕಾನೂನು' ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಬದಲಾದ ಪತ್ರಿಕೋದ್ಯಮಕ್ಕೆ ತಕ್ಕಂತೆ ಮಾಧ್ಯಮದ ವಿದ್ಯಾರ್ಥಿಗಳು ಕೌಶಲಗಳನ್ನು ಕಲಿಯಬೇಕು. ವಿದ್ಯಾರ್ಥಿಗಳಿಗೆ ಹೊಸತನ ತಿಳಿದುಕೊಳ್ಳವ ಕುತೂಹಲ ಇರಬೇಕು. ಸಾಮಾಜಿಕ ಸೌಹಾರ್ದತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಸದಭಿರುಚಿಯ ಹವ್ಯಾಸಗಳನ್ನು ಬಿಂಬಿಸಲು ಬಳಸಿಕೊಳ್ಳಬೇಕು ಎಂದರು.
ಹಿರಿಯ ಪ್ರಾಧ್ಯಾಪಕ ಪ್ರೊ. ಜೆ.ಎಂ. ಚಂದುನವರ ಮಾತನಾಡಿ, ಮಾಧ್ಯಮದ ವಿದ್ಯಾರ್ಥಿಗಳು ಸ್ವಯಂ ಶಿಸ್ತು, ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಪ್ರಸ್ತುತ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಂಜಯ ಕುಮಾರ ಮಾಲಗತ್ತಿ ಮಾತನಾಡಿ, ಸ್ನಾತಕೋತ್ತರ ಪದವಿ ನಂತರ ನಿಜವಾದ ವೃತ್ತಿಪರ ಜೀವನ ಪ್ರಾರಂಭವಾಗುವುದು. ಮಾಧ್ಯಮ ಕ್ಷೇತ್ರದಲ್ಲಿ ಅನೇಕ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ದತೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಅರುಣ ಕುಮಾರ ಹಬ್ಬು ಅವರು ರಚಿಸಿದ `ಮಾಧ್ಯಮ ಕಾನೂನುಗಳು' ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.
ಮಹಾಂತ ಕಾಲೇಜಿನ ಪ್ರೊ. ಜಯಲಕ್ಷ್ಮಿ ಯಂಡಿಗೇರಿ, ಕರ್ನಾಟಕ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಭಾಕರ ಕಾಂಬಳೆ ಮತ್ತು ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಬಡಿಗೇರ ಅವರನ್ನು ಸನ್ಮಾನಿಸಲಾ¬ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net