ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರಕಟ

ಪಂ. ಬಸವರಾಜ ರಾಜಗುರು
ಪಂ. ಬಸವರಾಜ ರಾಜಗುರು
Published on

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ನಿಂದ ಪಂ. ಬಸವರಾಜ ರಾಜಗುರು ಅವರ 106ನೇ ಜನ್ಮದಿನಾಚರಣೆ ಅಂಗವಾಗಿ ಆ. 24ರಂದು ಸಂಜೆ 5.30 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸತಿಕ ಭವನದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


20226ನೇ ಸಾಲಿನ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ಸಂಗೀತ ಕಲಾವಿದ ಬೆಂಗಳೂರಿನ (ಮೂಲತಃ ಉತ್ತರ ಕನ್ನಡ ಜಿಲ್ಲೆ) ಪಂ. ಪರಮೇಶ್ವರ ಹೆಗಡೆ ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಲಕ ಒಳಗೊಂಡಿದೆ. ಇದೇವೇಳೆ ಬೆಂಗಳೂರಿನ ಹಿಂದೂಸ್ತಾನಿ ಶಾಸ್ತ್ರೀಯ ಯುವ ಗಾಯಕ ಅನಿರುದ್ಧ ಐತಾಳ ಹಾಗೂ ಮೈಸೂರಿನ ಸರೋದ ವಾದಕ ಸಚಿನ್​ ಹಂಪೆ ಅವರಿಗೆ ಯುವ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು 25,000 ರೂ. ನಗದು ಬಹುಮಾನ ಒಳಗೊಂಡಿದೆ.
ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ಅಧ್ಯಕ್ಷ ಪಂ. ಎಂ. ವೆಂಕಟೇಶಕುಮಾರ ಉದ್ಘಾಟಿಸುವರು. ಜಿಲ್ಲಾಧಿಕಾರಿ ಸ್ನೇಹಲ್​ ಆರ್​. ಪ್ರಶಸ್ತಿ ಪ್ರದಾನ ಮಾಡುವರು. ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ಅಧ್ಯಕ್ಷ ಪಂ. ಕೈವಲ್ಯಕುಮಾರ ಗುರವ ಅಧ್ಯತೆ ವಹಿಸುವರು. ಪ್ರಶಸ್ತಿ ಪ್ರದಾನದ ನಂತರ ಪ್ರಶಸ್ತಿ ಪುರಸತರಾದ ಪಂ. ಪರಮೇಶ್ವರ ಹೆಗಡೆ ಮತ್ತು ಅನಿರುದ್ಧ ಐತಾಳ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಸಚಿನ್​ ಹಂಪೆ ಅವರಿಂದ ಸರೋದ ವಾದನ ಪ್ರಸ್ತುತಪಡಿಸುವರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net