parents meet ಆರ್ವಿಎಸ್ ಸ್ಕೂಲ್ನಲ್ಲಿ ಮಾರ್ಗದರ್ಶನ ಕಾರ್ಯಕ್ರಮ
parents meet ನವಲಗುಂದ ಖನ್ನೂರಿನ ಆರ್ವಿಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಸಾಧಕಿ ಪ್ರೇಮಾಬಾಯಿ ದೇಸಾಯಿಗೆ ಪ್ರೋತ್ಸಾಹ ಧನ ಚೆಕ್ ನೀಡಲಾಯಿತು. ಶ್ರೀ ಬಸವಲಿಂಗ ಸ್ವಾಮೀಜಿ, ಸುರೇಶ ಅಂಗಡಿ, ಎಸ್.ಕೆ. ಜಂಗಲೆಪ್ಪಗೌಡರ, ವಿಜಯ ಇತರರು ಇದ್ದರು.
Published on:
Copied
Follow Us
ಹುಬ್ಬಳ್ಳಿ: parents meet ನವಲಗುಂದ ತಾಲೂಕಿನ ಖನ್ನೂರಿನ ಆರ್.ವಿ.ಎಸ್. ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಪರಿಚಯ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಈ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅತಿಥಿಯಾಗಿದ್ದ ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಒನ್ ಲರ್ನ್ ಪಬ್ಲಿಷರ್ಸ್ ಸಂಸ್ಥೆಯ ಶ್ಯಾಮಸುಂದರ್ ಅವರು, ಮಕ್ಕಳ ಶಿಕ್ಷಣದಲ್ಲಿ ಪೋಷಕರ ಜವಾಬ್ದಾರಿ, ಸಕಾರಾತ್ಮಕ ಪೋಷಕತ್ವ ಹಾಗೂ ಮನೆ-ಶಾಲೆಯ ಸಮನ್ವಯದ ಕುರಿತು ಉಪಯುಕ್ತ ಮಾಹಿತಿ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಹುಬ್ಬಳ್ಳಿ ರುದ್ರಾಕ್ಷಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ಉತ್ತಮ ಸಂಸ್ಕಾರ, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಪ್ರೇಮಾಬಾಯಿ ದೇಸಾಯಿ ಅವರಿಗೆ ಚೇರ್ಮನ್ ಸುರೇಶ ಅಂಗಡಿ ಅವರು ಲಕ್ಷ ರೂ. ಚೆಕ್ ನೀಡಿ ಗೌರವಿಸಿದರು.
ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ 18ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.