

ಹುಬ್ಬಳ್ಳಿ: ರಾಜ್ಯದಲ್ಲಿ 2028ಕ್ಕೆ ಎನ್ಡಿಎ ಸರ್ಕಾರ ರಚನೆಯಾಗುವುದು ಖಚಿತ, ಕಾರ್ಯಕರ್ತರು ಸಂಯಮದಿಂದ ಒಕ್ಕಟ್ಟಾಗಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾ ರಡ್ಡಿ ಹೇಳಿದರು.
ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಜ್ಯಾತ್ಯತಿತ ಜನತಾದಳ ವತಿಯಿಂದ ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಮತ್ತು ನಾಯಕರ ಸಭೆಯಲ್ಲಿ ಅವರು ಮಾತನಾಡಿದರು.
ಯುವಕರು ಪಕ್ಷ ಹಾಗೂ ನಾಯಕತ್ವಕ್ಕೆ ನಿಷ್ಠರಾಗಿ ತಾಳ್ಮೆಯಿಂದ ಕೆಲಸ ಮಾಡಬೇಕು. ಪ್ರಾಮಾಣಿಕವಾಗಿ ದುಡಿಯುವವರಿಗೆ ಅವಕಾಶಗಳು ಸಿಕ್ಕೆ ಸಿಗುತ್ತವೆ. ಉತ್ತರ ಕರ್ನಾಟಕದಲ್ಲಿ ಪಕ್ಷ ಬಲಿಷ್ಠಗೊಳಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ನಿರುತ್ಸಾಹ ಹೊಂದಿದ್ದು, 2028ರ ಚುನಾವಣೆಯಲ್ಲಿ ಜನರೇ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ. ಚುನಾವಣೆಯಲ್ಲಿ ಎನ್ಡಿಎ ಗೆಲ್ಲಿಸಲು ಜನ ಸಿದ್ಧರಾಗಿದ್ದಾರೆ ಎಂದು ಹೇಳಿದರು.
ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ವೆಂಕಟರಾವ ನಾಡಗೌಡ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಳಿಯ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಹೋರಾಟ ಹಮ್ಮಿಕೊಳ್ಳಲು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾನಗರ ಜಿಲ್ಲಾ ಅಧ್ಯ ಗುರುರಾಜ ಹುಣಶಿಮರದ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಲು ಮತ್ತು ಸಂಘಟನೆಗೆ ಎಲ್ಲ ಮುಖಂಡರು, ಕಾರ್ಯಕರ್ತರು ಒಕ್ಕಟ್ಟಿನಿಂದ ಕೆಲಸ ಮಾಡಲು ಸಿದ್ಧರಿದ್ದಾರೆ ಎಂದರು.
ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿದರು. ಗ್ರಾಮಿಣ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ ಉಪಸ್ಥಿತರಿದ್ದರು.
ಪೂರ್ಣಿಮಾ ಸವದತ್ತಿ, ಗಂಗಾಧರ ಪೆರೂರ, ಬಾಷಾಸಾಬ ಮುದಗಲ್, ಸಿದ್ದು ಮಹಾಂತಒಡೆಯರ, ಶಂಕರ ಪವಾರ, ತುಳಸಿಕಾಂತ ಖೋಡೆ, ಪ್ರಕಾಶ ಅಂಗಡಿ, ಟಿ.ಪಿ. ತಪ್ಪಣ್ಣವರ, ಭೀಮರಾಯ ಗುಡೇನಕಟ್ಟಿ, ಪುನಿತ ಅಡಿಗಲ್, ಸುಧೀರ, ಶೋಭಾ ಕಿಲ್ಲೆದಾರ, ಮಂಜುಳಾ ವಾಜಪೇಯಿ, ಅಪ್ಪಣ್ಣ ಧರಣಿ, ಧಾರವಾಡಕರ, ಗೌಸ್ ನದಾ ಮುಂತಾದವರು ಉಪಸ್ಥಿತರಿದ್ದರು.