ಧಾರವಾಡ: ನಗರದ ಜೆಎಸ್ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಉಪನ್ಯಾಸಕಿ ವೈಶಾಲಿ ಮುನೋಳ್ಳಿ ಅವರು ಮಂಡಿಸಿದ "ಉತ್ತರ ಕರ್ನಾಟಕ ಜೈನ ಕೇಂದ್ರಗಳು' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಅವರಿಗೆ ಕರ್ನಾಟಕ ಕಲಾ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಜಗದೀಶ ಕಿವುಡನವರ ಮಾರ್ಗದರ್ಶಕರಾಗಿದ್ದರು.