Pipeline ಪೈಪ್​ಲೈನ್ ದುರಸ್ತಿ ಕಾರ್ಯ ಕೊನೆಗೂ ಆರಂಭ

Pipeline ಹುಬ್ಬಳ್ಳಿಯ ದೇಸಾಯಿ ಸರ್ಕಲ್​ನಲ್ಲಿ ಒಡೆದಿರುವ ಕುಡಿಯುವ ನೀರು ಪೂರೈಕೆ ಪೈಪ್​ನ ದುರಸ್ತಿ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ವೀಕ್ಷಿಸಿದರು.
Pipeline ಹುಬ್ಬಳ್ಳಿಯ ದೇಸಾಯಿ ಸರ್ಕಲ್​ನಲ್ಲಿ ಒಡೆದಿರುವ ಕುಡಿಯುವ ನೀರು ಪೂರೈಕೆ ಪೈಪ್​ನ ದುರಸ್ತಿ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ವೀಕ್ಷಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಭವಿಷ್ಯದಲ್ಲಿ ಮತ್ತೆ ಪೈಪ್ ಒಡೆದು, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು.
  • ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂಧನೆ ಮಾಡಬೇಕು.
  • ದುರಸ್ತಿ ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಅಸಮಾಧಾನ
ಹುಬ್ಬಳ್ಳಿ :
ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಇತ್ತೀಚೆಗೆ ದೇಸಾಯಿ ಸರ್ಕಲ್​ಗೆ ಭೇಟಿ ನೀಡಿ, ನೀರು ಪೋಲಾಗುವುದನ್ನು ಪರಿಶೀಲಿಸಿದ್ದರು.
ಈ ಕುರಿತು ಕೆಡಿಪಿ ಸಭೆಯಲ್ಲಿ ಎಲ್ ಆಂಡ್ ಟಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು. ವರ್ಷಗಳಿಂದ ನೀರು ಸೋರಿಕೆಯಾಗುತ್ತಿದ್ದರೂ, ದುರಸ್ತಿ ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಸೋಮವಾರದಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಮತ್ತೊಮ್ಮೆ ದೇಸಾಯಿ ಸರ್ಕಲ್​ಗೆ ಭೇಟಿ ನೀಡಿದ್ದಾಗ ಕಾಮಗಾರಿ ಆರಂಭಗೊಂಡಿತ್ತು.
ಈ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚು ಇರುವುದರಿಂದ ಆದ್ಯತೆ ಮೇರೆಗೆ ವೇಗವಾಗಿ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭವಿಷ್ಯದಲ್ಲಿ ಮತ್ತೆ ಪೈಪ್ ಒಡೆದು, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ದೂರು ನೀಡುವವರೆಗೆ ಅಥವಾ ಜನಪ್ರತಿನಿಧಿಗಳು ಪರಿಶೀಲನೆ ನಡೆಸುವವರೆಗೆ ದುರಸ್ತಿ ಕಾರ್ಯ ಕೈಗೊಳ್ಳಬಾರದೆಂಬ ಅಧಿಕಾರಿಗಳ ಮನಸ್ಥಿತಿ ಸರಿಯಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂಧನೆ ಮಾಡಬೇಕು ಎಂದು ಸೂಚಿಸಿದರು.
ಪಾಲಿಕೆ ಸದಸ್ಯೆ ಮೀನಾಕ್ಷಿ ಒಂಟಮುರಿ, ಬಿಜೆಪಿ ಮುಖಂಡ ರವಿ ನಾಯಕ, ಸಿದ್ದು ಮೊಗಲಿಶೆಟ್ಟರ, ಎಲ್ ಆಡ್ ಟಿ ಇಲಾಖೆಯ ಚಂದ್ರಶೇಖರ ಮಾಲಿಪಾಟೀಲ, ಕಿರಣ ಗಂಜಾಳ ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net