(police commissioner) ಶ್ರುತಿ ಎನ್.ಎಸ್. ಅಧಿಕಾರ ಸ್ವೀಕಾರ

ಹು-ಧಾ ಪೊಲೀಸ್ ಆಯುಕ್ತಾಲಯದ (police commissioner)ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಶ್ರುತಿ ಎನ್.ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಹು-ಧಾ ಪೊಲೀಸ್ ಆಯುಕ್ತಾಲಯದ (police commissioner)ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಶ್ರುತಿ ಎನ್.ಎಸ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
Published on
ಹುಬ್ಬಳ್ಳಿ: ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಶ್ರುತಿ ಎನ್.ಎಸ್. ಅವರು ನವನಗರದ ಹು-ಧಾ ಪೊಲೀಸ್ ಆಯುಕ್ತಾಲಯದ (police commissioner) ಕಚೇರಿಯಲ್ಲಿ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಮೂಲತಃ ಮಡಿಕೇರಿಯವರಾದ ಶ್ರುತಿ ಎನ್.ಎಸ್. ಅವರು 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಮಂಗಳೂರು ಜಿಲ್ಲೆಯ ಗುಪ್ತವಾರ್ತೆ, ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಇತರೆಡೆ ಕರ್ತವ್ಯ ನಿರ್ವಹಿಸಿದ್ದು, ಈಗ ಹು-ಧಾ ಪೊಲೀಸ್ ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರಭಾರ ಡಿಸಿಪಿಯಾಗಿದ್ದ ಸಿ.ಆರ್. ರವೀಶ ಅವರು ಶ್ರುತಿ ಎನ್.ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net