police constable exam ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಪರೀಕ್ಷೆ

 police constable exam ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಪರೀಕ್ಷೆ ವೇಳೆ ಪೊಲೀಸರು, ಅಭ್ಯರ್ಥಿಗಳನ್ನು ತಪಾಸಿಸಿದರು.
police constable exam ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಪರೀಕ್ಷೆ ವೇಳೆ ಪೊಲೀಸರು, ಅಭ್ಯರ್ಥಿಗಳನ್ನು ತಪಾಸಿಸಿದರು.
Published on

ಹುಬ್ಬಳ್ಳಿ: ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ police constable exam ಆಕಾಂಕ್ಷಿಗಳು ಹು-ಧಾ ಅವಳಿ ನಗರದ ವಿವಿಧ ಕಾಲೇಜ್‌ಗಳ 55 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ಬರೆದಿದ್ದು, ಇವರಲ್ಲಿ ಶೇ. 94.56ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 19536 ಅಭ್ಯರ್ಥಿಗಳು ಹುದ್ದೆ ಬಯಸಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 18473 ಅಭ್ಯರ್ಥಿಗಳು ಹಾಜರಾಗಿದ್ದು, 1159 ಜನರು ಗೈರಾಗಿದ್ದಾರೆ.
ಪರೀಕ್ಷೆಗಳ ಹಿನ್ನೆಲೆಯಲ್ಲಿ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪರೀಕ್ಷಾ ಕೇಂದ್ರದ ಒಳಗಡೆ ಹೋಗುವ ಅಭ್ಯರ್ಥಿಗಳನ್ನು ಮೆಟಲ್ ಡಿಟೆಕ್ಟರ್ ಬಳಸಿ ಪೊಲೀಸರು ತಪಾಸಣೆ ನಡೆಸಿ ಒಳಗಡೆ ಬಿಟ್ಟರೆ, ಇದಕ್ಕೂ ಮುನ್ನ ಅಭ್ಯರ್ಥಿಗಳ ಬಯೋಮೆಟ್ರಿಕ್ ಮಾಡಲು ಸರ್ವರ್ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಸ್ವಲ್ಪ ಹೊತ್ತು ಅಭ್ಯರ್ಥಿಗಳು ಆತಂಕ ಎದುರಿಸಬೇಕಾಯಿತು. ತದನಂತರ ಸಮಸ್ಯೆ ಪರಿಹರಿಸಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಲಾಯಿತು.
‘ಪರೀಕ್ಷಾ ಕೇಂದ್ರದ ಸುತ್ತಲೂ ಬಿಎನ್‌ಎಸ್ 63 ಕಾಯ್ದೆ ಅನ್ವಯ ನಿಷೇಧಾಜ್ಷೆ ಜಾರಿ ಮಾಡಲಾಗಿತ್ತು. 700ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಧಾರವಾಡ ಜಿಲ್ಲೆಯಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ’ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net