ದಲಿತ ಸಂಘರ್ಷ ಸಮಿತಿ ರಾಜ್ಯ ಸಂಟನಾ ಸಂಚಾಲಕಿ ಹೇಮಾವತಿ ಟಿ. ಮಾತನಾಡಿ, ಅನಕ್ಷರಸ್ಥ, ಬಡ ದಲಿತ ಕುಟುಂಬದವನ್ನು ಶೋಷಿಸಲಾಗಿದೆ. ಹೀಗಾಗಿ ಸರ್ಕಾರ ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಗೊತ್ತಿದ್ದೂ ಗೊತ್ತಿಲ್ಲದಂತಿರುವ ಅಂಜುಮನ್ ಸಂಸ್ಥೆ ಮುಖ್ಯಸ್ಥರು, ದಲಿತ ಯುವತಿ ಸಾವಿಗೆ ಕಾರಣರಾದ ತಪ್ಪಿತಸ್ಥರಿಗೆ ಏನು ಶಿಕ್ಷೆ ಕೊಡಬೇಕು ಎಂಬುದನ್ನು ಅವರೇ ಹೇಳಬೇಕು ಎಂದರು.