PRC bjp ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿದರು. ಶಾಸಕ ಮಹೇಶ ಟೆಂಗಿನಕಾಯಿ, ಎಂಎಲ್ಸಿ ಪ್ರದಿಪ ಶೆಟ್ಟರ್, ಡಾ. ಕ್ರಾಂತಿಕಿರಣ, ತಿಪ್ಪಣ್ಣ ಮಜ್ಜಗಿ, ರಾಜು ಕೋರ್ಯಾಣಮಠ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ವಿರೋಧ ಪಕ್ಷದ ಉಪನಾಯಕ ಬೆಲ್ಲದ ಎಚ್ಚರಿಕೆ
ರಾಜ್ಯ ಸರ್ಕಾರದಿಂದ ಉಕಕ್ಕೆ ಅನ್ಯಾಯ
ಹುಬ್ಬಳ್ಳಿ: PRC bjp ಅಕ್ರಮ ನುಸುಳುಕೋರರು ಅದರಲ್ಲೂ ಬಾಂಗ್ಲಾ, ಪಾಕ್ ವಲಸಿಗರಿಗಾಗಿ ಕಾಯಂ ನಿವಾಸಿ ಪ್ರಮಾಣ ಪತ್ರ (ಪಿಆರ್ಸಿ) ವಿತರಿಸಲು ರಾಜ್ಯದ ಮತಾಂಧ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಎಸ್ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ಹಾಗೂ ಅದರ ಕಾರ್ಯಕರ್ತರು ಸಾಕಷ್ಟು ಅಡ್ಡಿಪಡಿಸಿದ್ದಾರೆ. ಇದೀಗ ಪಿಆರ್ಸಿ ಸುತ್ತೋಲೆ ಹೊರಡಿಸುವ ಮೂಲಕ ಸಂವಿಧಾನ ಬಾಹಿರ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ.
ಸಂವಿಧಾನದ 14ನೇ ಕಲಂ ಪ್ರಕಾರ ಕೇಂದ್ರ ಸರ್ಕಾರಕ್ಕೆ ಕಾಯಂ ರಹವಾಸಿ ಪತ್ರ ನೀಡುವ ಅಧಿಕಾರ ಇದೆ. ಕೇಂದ್ರ ಸರ್ಕಾರದ ಅನುಮತಿಯನ್ನೂ ಪಡೆಯದೇ ಇಂತಹ ಕೆಲಸ ಮಾಡುತ್ತಿರುವುದು ಕಾನೂನು ವಿರೋಧಿ ಕೆಲಸ ಎಂದು ದೂರಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಹಣೆ ಮೇಲೆ ವಿಭೂತಿ ಧರಿಸುತ್ತಾರೆ. ಇನ್ನೊಂದೆಡೆ ನುಸುಳುಕೋರರಿಗೆ ಅನುಕೂಲವಾಗುವಂತಹ ಹಾಗೂ ಮುಸ್ಲಿಂ ತುಷ್ಟೀಕರಣದ ಕೆಲಸ ಮಾಡುತ್ತಿದ್ದಾರೆ. ಉಳಿದ ರಾಜಕಾರಣ ಏನೇ ಮಾಡಲಿ ಆದರೆ, ದೇಶದ ಭದ್ರತೆಗೆ ಧಕ್ಕೆ ತರುವಂತಹ ಕಾರ್ಯ ಕೈಗೊಳ್ಳಬಾರದು ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರ ಸುತ್ತೋಲೆ ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟದ ಬಗ್ಗೆ ಪಕ್ಷ ನಿರ್ಧಾರ ಮಾಡಲಿದೆ ಎಂದರು.
ಬರ ಕಾಣುತ್ತಿಲ್ಲ
ರಾಜ್ಯ ಸರ್ಕಾರಕ್ಕೆ ಬರಗಾಲ ಕಾಣುತ್ತಿಲ್ಲ. ಬೆಂಗಳೂರು ಅಭಿವೃದ್ಧಿಗೆ 1.14 ಲಕ್ಷ ಕೋಟಿ ರೂ. ಯೋಜನೆ ರೂಪಿಸುವ ಸಿಎಂ ಅವರು, ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೂ ಏನಾದರೂ ಪ್ಯಾಕೇಜ್ ನೀಡುವ ಭರವಸೆ ಇತ್ತು. ಆದರೆ, ಬೆಳಗಾವಿ ಭೇಟಿ ಸಂದರ್ಭದಲ್ಲಿ ಇದರ ಬಗ್ಗೆ ಚಕಾರ ಎತ್ತಲಿಲ್ಲ. ಸಿಎಂ ಕರ್ನಾಟಕದ ಉತ್ತರ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅರವಿಂದ ಬೆಲ್ಲದ ದೂರಿದರು.
ರಾಜ್ಯದಲ್ಲಿ ಉಂಟಾಗಿರುವ ಬರ ಹಾಗೂ ನೆರೆ ಬಗ್ಗೆ ಸಮೀಕ್ಷೆ ಮಾಡಬೇಕು. ಎನ್ ಡಿಆರ್ ಎಫ್ ನಿಯಮಾವಳಿ ಪ್ರಕಾರ ಕೇಂದ್ರದಿಂದ ಬರಬೇಕಾದ ಪರಿಹಾರದ ಬಗ್ಗೆ ನಾವು ಕೂಡ ಗಮನ ಸೆಳೆಯುತ್ತೇವೆ. ಉಳ್ಳಾಗಡ್ಡಿ ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಬೆಲ್ಲದ ಉತ್ತರಿಸಿದರು.
ಎಸ್ಐಆರ್ ಹಾಳು ಮಾಡಲು ಎಲ್ಲ ಯತ್ನ
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಜ್ಯದಲ್ಲಿ ಎಸ್ಐಆರ್ ಹಾಳು ಮಾಡಲು ಎಲ್ಲ ಪ್ರಯತ್ನಗಳನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಮ್ಯಾಪಿಂಗ್ ಮಾಡುವಲ್ಲಿ ಬಹಳಷ್ಟು ಅಕ್ರಮಗಳನ್ನು ಎಸಗಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಇದೀಗ ಪಿಆರ್ಸಿ ಹೆಸರಿನಲ್ಲಿ ಅಕ್ರಮ ವಲಸಿಗರನ್ನು ರಕ್ಷಿಸಲು ರಾಜ್ಯ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ದೇಶದ ಭದ್ರತೆಗೆ ಹಾನಿ ಉಂಟು ಮಾಡುವ ಇಂತಹ ಕೆಲಸದಿಂದ ಹಿಂದೆ ಸರಿಯಬೇಕು. ಸುತ್ತೋಲೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಗೃಹ ಸಚಿವ ಪ್ರಿಯಾಂಕ್ ಅವರು ಬೆಳಗಾದರೆ ಆರ್ಎಸ್ಎಸ್, ಬಿಜೆಪಿ ತೆಗಳುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಏನೇ ಆದರೂ ಅವರು ಚಿಂತಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.