ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆಗೆ ಆದ್ಯತೆ

ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿದರು.
Published on

ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ, ಬುನಾದಿ ಸಾರತೆ ಮತ್ತು ಸಂಖ್ಯಾಜ್ಞಾನ ಕಾರ್ಯಕ್ರಮ ಹಾಗೂ ಪಾಠ ಆಧಾರಿತ ಮೌಲ್ಯಾಂಕನವನ್ನು (ಎಲ್​ಬಿಎ) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಶಿಕರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಲಾ ಶಿಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.

ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್​ನಲ್ಲಿರುವ ದೇಶಪಾಂಡೆ ೌಂಡೇಶನ್​ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸುವುದಷ್ಟೇ ಗುರಿಯಾಗಬಾರದು. ವಿದ್ಯಾಥಿರ್ಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಅತ್ಯುತ್ತಮ ಮತ್ತು ಗುಣಮಟ್ಟದ

ಪಡೆಯಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಮಿಷನ್​ 60 ಪ್ಲಸ್​ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ಇಲಾಖೆಯ ನಿರ್ದೇಶಕಿ ಮಮತಾ ನಾಯಕ, ಸಹ ನಿರ್ದೇಶಕಿ ಜಯಶ್ರೀ ಕಾರೇಕರ, ಉಪ ನಿರ್ದೇಶಕರಾದ ಗಿರೀಶ ಪದಕಿ, ಬಸವರಾಜ ನಾಲತವಾಡ, ಉಮೇಶ ಬೊಮ್ಮಕ್ಕನವರ ಹಾಗೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net