ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡನೆ ಎಸ್‌ಯುಸಿಐನಿಂದ ಪ್ರತಿಭಟನೆ

ಎಸ್ ಯುಸಿಐ ಪ್ರತಿಭಟನೆ
ಎಸ್ ಯುಸಿಐ ಪ್ರತಿಭಟನೆ
Published on
ಧಾರವಾಡ: ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ 11 ದಿನಗಳಲ್ಲಿ 4 ಬಾರಿ ಏರಿಕೆ ಮಾಡಿರುವ ಕ್ರಮ ಖಂಡಿಸಿ ಎಸ್‌ಯುಸಿಐ ನಿಂದ ನಗರದ ವಿವೇಕಾನಂದ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಈ ವೇಳೆ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ ಮಾತನಾಡಿ, ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣ ದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ-ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಪಂಚರಾಜ್ಯಗಳ ಚುನಾವಣೆ ವೇಳೆ ದೇಶವು ಸಬಲವಾಗಿದೆ. ಯುದ್ದದ ಪರಿಣಾಮ ಭಾರತದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ ಪ್ರಧಾನಮಂತ್ರಿ ನಿಜ ಬಣ್ಣ ಬಯಲಾಗಿದೆ ಎಂದರು.
ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈ ಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಗಳೇ ಇವೆ. ಹಾಗಾಗಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿದರು.
ತೈಲ ಕಂಪನಿಗಳ ಲಾಭಕ್ಕಾಗಿ ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್‌ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿ ಕೈ ಬಿಡಬೇಕು. ಈ ಯುದ್ಧವನ್ನು ನಿಲ್ಲಿಸುವಂತೆ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆ ಕಂಡರೂ ಸಹ ಅದರ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ. ಬದಲಿಗೆ ಬೆಲೆ ಏರಿಕೆ ಬರೆ ಹಾಕಲಾಗುತ್ತಿದೆ. ಆದರೆ ತೈಲ ಕಂಪನಿಗಳು ಲಕ್ಷಾಂತರ ಕೋಟಿ ರೂ. ಲಾಭ ಮಾಡಿಕೊಂಡಿವೆ. ಈ ಹಿಂದಿನ ಕಾಂಗ್ರೆಸ್‌ನ ಬೆಲೆ ಏರಿಕೆ ನೀತಿಯನ್ನೇ ಬಿಜೆಪಿ ಮುಂದುವರಿಸಿದೆ. ಈ ಎರಡು ಪಕ್ಷಗಳು ಜನ ವಿರೋಽಯಾಗಿದ್ದು, ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಆಗಿವೆ. ಈ ಹಿನ್ನೆಲೆಯಲ್ಲಿ ಜನ ಹೋರಾಟ ತೀವ್ರಗೊಳಿಸಬೇಕು ಎಂದರು.
ಮದುಲತಾ ಗೌಡರ, ಗಂಗಾಧರ ಬಡಿಗೇರ, ಭುವನಾ ಬಳ್ಳಾರಿ, ದೀಪಾ ಧಾರವಾಡ, ಗಂಗಾ ಕೋಕರೆ, ದೇವಮ್ಮ ದೇವತಕಲ್, ರುದ್ರಕಾಂತ, ದಾದ್ ಪೀರ್‌ಸಾಬ್, ಯಲ್ಲಪ್ಪ, ಸಿಂಧು, ಶಶಿಕಲಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net