ಕೃಷಿ ಅಧಿಕಾರಿ ನೇಮಕದಲ್ಲಿ ಅನ್ಯಾಯ ಖಂಡಿಸಿ ಪ್ರತಿಭಟನೆ

ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿಯಲ್ಲಿ ನಿಯಮಬಾಹಿರ ಅರ್ಹತೆ ರದ್ದುಗೊಳಿಸಲು ಒತ್ತಾಯಿಸಿ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ನೇಮಕಾತಿಯಲ್ಲಿ ನಿಯಮಬಾಹಿರ ಅರ್ಹತೆ ರದ್ದುಗೊಳಿಸಲು ಒತ್ತಾಯಿಸಿ ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
Published on
ಧಾರವಾಡ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಬಿ.ಇ. ಬಯೋಟೆಕ್ನಾಲಜಿ ಹಾಗೂ ರೈಟೆಕ್​ ವಿಶ್ವವಿದ್ಯಾಲಯದ ಪದವೀಧರರನ್ನು ಪರಿಗಣಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು. ರಾಜ್ಯದ ಅರ್ಹ ಕೃಷಿ ಪದವೀಧರರಿಗೆ ಆಗಿರುವ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೃಷಿ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಕೃಷಿ ವಿವಿ ವಿದ್ಯಾರ್ಥಿ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ರೈಟೆಕ್​ ಖಾಸಗಿ ವಿಶ್ವವಿದ್ಯಾಲಯವು ಯುಜಿಸಿಯಿಂದ ಮಾತ್ರ ಮಾನ್ಯತೆ ಪಡೆದಿದ್ದು, ಭಾರತೀಯ ಕೃಷಿ ಸಂಶೋಧನಾ ಮಂಡಳಿ ಅಥವಾ ಸಂಬಂಧಿತ ಕೃಷಿ ಶಿಕ್ಷಣ ನಿಯಂತ್ರಣ ಸಂಸ್ಥೆಗಳ ಮಾನ್ಯತೆ ಹೊಂದಿಲ್ಲ. ಆದರೂ ರೈಟೆಕ್​ ವಿಶ್ವವಿದ್ಯಾಲಯದ ಪದವೀಧರರಿಗೆ ಅಜಿರ್ ಸಲ್ಲಿಸಲು ಅವಕಾಶ ನೀಡಲಾಗಿದೆ. ಜತೆಗೆ ಬಿ.ಇ. ಬಯೋಟೆಕ್ನಾಲಜಿ ಅಭ್ಯಥಿರ್ಗಳನ್ನು ಅರ್ಹರೆಂದು ಪರಿಗಣಿಸಲಾಗಿದೆ. ಸರ್ಕಾರದ ಈ ಕ್ರಮ ಕೃಷಿ ಇಲಾಖೆಯ ಕಾರ್ಯಕ್ಷಮತೆ ಹಾಗೂ ರೈತರ ಹಿತಾಸಕ್ತಿ ಕಾಪಾಡಬಹುದೇ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ನೇಮಕಾತಿಯ ಲೋಪಗಳು, ಅರ್ಹತಾ ನಿಯಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದು ಸರಿಪಡಿಸುವವರೆಗೆ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕೃಷಿ ವಿಶ್ವವಿದ್ಯಾಲಯ ಕುಲಪತಿಗೆ ಮನವಿ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net