ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ನಾಲ್ವರು ಮಹನೀಯರ ಹೆಸರು ಶಿಫಾರಸು ಮಾಡಿದೆ. ಈ ಭಾಗದ ಸಂಸದರು, ಶಾಸಕರು ಕೂಡ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷದಿಂದ ತೀವ್ರ ಪ್ರಯತ್ನ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಓಗೊಡುತ್ತಿಲ್ಲ. ಹಾಗಾಗಿ ಇಲ್ಲಿಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಇರುವ ಚಿಟಗುಪ್ಪಿ ಪಾರ್ಕ್ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದರು.