ಮಹದಾಯಿಗಾಗಿ 30ಕ್ಕೆ ಪ್ರತಿಭಟನೆ Protest

Protest ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಚಳವಳಿ ರಾಜ್ಯ ಸಂಚಾಲಕ ಶಿವಾನಂದ ಮುತ್ತಣ್ಣವರ.
Protest ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಚಳವಳಿ ರಾಜ್ಯ ಸಂಚಾಲಕ ಶಿವಾನಂದ ಮುತ್ತಣ್ಣವರ.
Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡ ಚಲನಚಿತ್ರ ರಂಗದ ಹಲವಾರು ಕಲಾವಿದರು ಪಾಲ್ಗೊಳ್ಳಲಿದ್ದಾರೆ
  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು.
  • ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ
ಹುಬ್ಬಳ್ಳಿ :
Protest ಮಹದಾಯಿ, ಕಳಸಾ ಬಂಡೂರಿ ನಾಲಾ ಜೋಡಣೆ ಯೋಜನೆ ಅನುಷ್ಠಾನ ಹಾಗೂ ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರು ನಾಮಕರಣಕ್ಕೆ ಒತ್ತಾಯಿಸಿ ಮೇ 30 ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಗುರುವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಚಳವಳಿ ರಾಜ್ಯ ಸಂಚಾಲಕ ಶಿವಾನಂದ ಮುತ್ತಣ್ಣವರ, ಮೂರುಸಾವಿರ ಮಠದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು.
ಕನ್ನಡ ಚಲನಚಿತ್ರ ರಂಗದ ಹಲವಾರು ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಹದಾಯಿ ಹಾಗೂ ರಾಜ್ಯದ 5 ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣಕ್ಕೆ ಒತ್ತಾಯಿಸಿ ಹಲವು ಹೋರಾಟ, ಮನವಿಗಳನ್ನು ಸಲ್ಲಿಸಲಾಗಿದೆ.
ಆದರೆ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸಾಕಷ್ಟು ನಿರ್ಲಕ್ಷ್ಯ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
4 ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರು ನಾಮಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಕಳೆದ 2 ವರ್ಷಗಳ ಹಿಂದೆ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಿದೆ. ಆದರೂ, ಇದೂವರೆಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ, ಶಿವಮೊಗ್ಗ ಏರ್​ಪೋರ್ಟ್​ಗೆ ರಾಷ್ಟ್ರಕವಿ ಕುವೆಂಪು, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜೊ್ಯೕತಿ ಬಸವೇಶ್ವರ ಹೆಸರು ನಾಮಕಾರಣ ಮಾಡಬೇಕು. ಬೆಂಗಳೂರಿನ 2ನೇ ಟರ್ವಿುನಲ್​ಗೆ ಡಾ. ರಾಜಕುಮಾರ ಅವರ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.
ರೈತ ಹೋರಾಟಗಾರ ಹೇಮನಗೌಡ ಬಸನಗೌಡರ ಮಾತನಾಡಿ, ಮಹದಾಯಿ, ಕಳಸಾ-ಬಂಡೂರಿ ಯೋಜನೆ ಈ ಭಾಗದ ಬಹು ಬೇಡಿಕೆಯ ಯೋಜನೆಯಾಗಿದೆ. ಕೇಂದ್ರದ ಅರಣ್ಯ ಇಲಾಖೆಯು ಯೋಜನೆಯ ಕಡತವನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವುದು ಸರಿ ಅಲ್ಲ ಎಂದರು.
ಮಹದಾಯಿ ವಿಷಯವನ್ನು ಪ್ರಧಾನಿ ಅವರು ಗಂಭೀರವಾಗಿ ಪರಿಗಣಿಸಿಲ್ಲ. ಈ ಭಾಗದ ಪ್ರಮುಖ ಕುಡಿಯುವ ನೀರಿನ ವಿಚಾರದಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ.
ಯೋಜನೆಯನ್ನು ಕೇವಲ ರಾಜಿಕೀಯ ಭಾಷಣಕ್ಕೆ ಸೀಮಿತಗೊಳಿಸದೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net