ಅನಿರ್ದಿಷ್ಟಾವಧಿ ಧರಣಿ (protest) ಹಿಂದಕ್ಕೆ

 ವಿವಿಧ ಬೇಡಿಕೆರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿ ಎದುರಿನ ಉದ್ಯಾನದಲ್ಲಿ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ (protest) ಮಂಗಳವಾರ ಹಿಂಪಡೆಯಲಾಯಿತು.
ವಿವಿಧ ಬೇಡಿಕೆರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿ ಎದುರಿನ ಉದ್ಯಾನದಲ್ಲಿ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ (protest) ಮಂಗಳವಾರ ಹಿಂಪಡೆಯಲಾಯಿತು.
Published on
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಚೇರಿ ಎದುರಿನ ಉದ್ಯಾನದಲ್ಲಿ ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ (protest) ಮಂಗಳವಾರ ಹಿಂಪಡೆಯಲಾಯಿತು.
ದೆಹಲಿಯಲ್ಲಿ ರಾಜ್ಯದ ನಾಲ್ವರು ಕೇಂದ್ರ ಸಚಿವರು ಡಿ. 3ರಂದು ಸಂಬಂಧಿಸಿದ ಇಲಾಖೆಗಳ ಸಚಿವರೊಂದಿಗೆ ಸಭೆ ನಡೆಸಿ ಬೇಡಿಕೆ ಈಡೇರಿಸುವ ಕುರಿತು ಚರ್ಚಿಸಲು ತೀರ್ಮಾನಿಸಿದ್ದಾರೆ. ಆದ್ದರಿಂದ ಹೋರಾಟ ಹಿಂಪಡೆಯಲಾಗಿದ್ದು ಮೂರು ಸಂಘಟನೆಗಳ ರಾಜ್ಯ ಮುಖಂಡರ ನಿಯೋಗವು ಡಿ. 3ರಂದು ಬೆಳಗ್ಗೆ ದೆಹಲಿಗೆ ತೆರಳಲಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ತಿಳಿಸಿದರು.
ಸಚಿವರ ಆಪ್ತ ಕಾರ್ಯದರ್ಶಿ, ಹಿರಿಯ ಪೋಲೀಸ್ ಅಧಿಕಾರಿಗಳು ಧರಣಿ ಸ್ಥಳಕ್ಕೆ ಆಗಮಿಸಿ ಅಧಿಕೃತ ವಿಷಯ ತಿಳಿಸಿ ಮನವಿ ಸ್ವೀಕರಿಸಿದರು. ಇದಕ್ಕೂ ಮೊದಲು ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡಿಯೋ ಕಾಲ್ ಮೂಲಕ ಸಚಿವರು ಮಾತನಾಡಿ, ಈ ವಿಷಯವನ್ನು ತಿಳಿಸಿದರು.
ಅಕ್ಷರದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ, ಅಂಗನವಾಡಿ ನೌಕರರ ಸಂಘದ ಉಪಾಧ್ಯಕ್ಷೆ ಯಮುನಾ ಗಾಂವಕರ, ಮುಖಂಡರಾದ ಲಕ್ಷ್ಮೀದೇವಮ್ಮ, ಸಿದ್ದಮ್ಮ ಕಲ್ಗುಡಿ, ಚನ್ನಮ್ನ ಡೊಳ್ಳಿನ, ದೊಡ್ಡವ್ವ ಪೂಜಾರ, ಶಾರದಾ ರೋಣದ, ಮಹೇಶ ಹಿರೇಮಠ, ಯಶೋಧಾ ಬೆಟಗೇರಿ, ವಿದ್ಯಾ ವೈದ್ಯ, ಗಂಗಾ ನಾಯ್ಕ, ಜಯಶ್ರೀ ಹಿರೇಕರ, ಕಲಾವತಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net