(protest) ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ(protest) ಹು-ಧಾ ಆಗ್ರೋ ಟ್ರೇಡರ್ಸ್ ಅಸೋಸಿಯೇಷನ್ ವತಿಯಿಂದ ಹುಬ್ಬಳ್ಳಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ(protest) ಹು-ಧಾ ಆಗ್ರೋ ಟ್ರೇಡರ್ಸ್ ಅಸೋಸಿಯೇಷನ್ ವತಿಯಿಂದ ಹುಬ್ಬಳ್ಳಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
Published on
ಹುಬ್ಬಳ್ಳಿ: ಡಿಎಪಿ ಮತ್ತು ಯೂರಿಯಾದ ಜತೆಗೆ ಒತ್ತಾಯವಾಗಿ ಉತ್ಪಾದನೆಗಳ ಲಿಂಕ್‌ಮಾಡುವುದು ಕೈಬಿಡಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹು-ಧಾ ಆಗ್ರೋ ಟ್ರೇಡರ್ಸ್ ಅಸೋಸಿಯೇಷನ್ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ (protest) ನಡೆಯಿತು.
ಎಲ್ಲ ರಸಗೊಬ್ಬರಗಳ ಎಂಆರ್‌ಪಿ ಮೇಲೆ ಶೇ. 8 ಡೀಲರ್ ಲಾಭಾಂಶ ಇರುವುದನ್ನು ನೋಡಿಕೊಳ್ಳಬೇಕು. ಎಲ್ಲ ರಸಗೊಬ್ಬರಗಳನ್ನು ಎಫ್‌ಒ ಎಲ್ ಕೊಡುವ ಹಾಗೆ ಕ್ರಮ ಕೈಗೊಳ್ಳಬೇಕು. ಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳ ಶಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಡೀಲರ್‌ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ ಮನವಿಯನ್ನು ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಲಾಯಿತು.
ಅಸೋಸಿಯೇಷನ್ ಅಧ್ಯಕ್ಷ ಸುಹಾಸ ಶೆಟ್ಟರ್, ಉಪಾಧ್ಯಕ್ಷ ಎಸ್.ಎ. ಲಕ್ಮೇಶ್ವರ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ತಾಳೆಬೈಲ್ಕರ್, ಯು.ಎಂ. ಕಟಗಿ, ಕೆ. ಮಂಜುನಾಥ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net