ಉಕ ಶಾಲಾ, ಕಾಲೇಜುಗಳಿಗೆ ನ. 3 ರಿಂದ ಬೀಗ ಹಾಕಿ ಪ್ರತಿಭಟನೆ protest

protest ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಮಾಜಿ ಸಭಾಪತಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ.
protest ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಮಾಜಿ ಸಭಾಪತಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ.
Published on

ಪ್ರಮುಖ ಮುಖ್ಯಾಂಶಗಳು

  • ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಒತ್ತಾಯ
  • ನ. 2ರಂದು ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ
  • ಸಿದ್ದರಾಮಯ್ಯ ಸರ್ಕಾರದಿಂದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ ಆರಂಭ
ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನ. 2ರಂದು ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಲಾಗುವುದು.
ಅಂದಿನ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ಶಿಕ್ಷಕರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರದಿಂದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ ಆರಂಭಗೊಂಡಿದ್ದು, ಇಂದಿಗೂ ಮುಂದುವರೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸಹ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅನುದಾನಿತ ಶಾಲೆ, ಕಾಲೇಜುಗಳಲ್ಲಿ ಶೇ. 69.78ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಒಟ್ಟು 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ ಅನುದಾನಿತ ಶಾಲೆಗಳಲ್ಲಿ ಸುಮಾರು 9 ಸಾವಿರ ಹುದ್ದೆಗಳು ಖಾಲಿ ಇವೆ. 1995ರಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ನೇಮಕಾತಿ ನಡೆದಿಲ್ಲ.
ಹೀಗಾಗಿ, ಕನ್ನಡ ಮಾಧ್ಯಮದ ಅನುದಾನಿತ ಶಾಲಾ, ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಮುಚ್ಚುವ ಸ್ಥಿತಿಗೆ ಬಂದಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಈ ಶಾಲೆ, ಕಾಲೇಜುಗಳು ಸಂಪೂರ್ಣ ಮುಚ್ಚುತ್ತವೆ. ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳಿಗೆ ಪ್ರವೇಶ ಸಿಗುವುದು ಕಷ್ಟವಾಗುತ್ತದೆ ಎಂದರು.
ಇತ್ತೀಚೆಗೆ ಪಬ್ಲಿಕ್ ಸ್ಕೂಲ್ ಮಾದರಿ ಹೆಚ್ಚುತ್ತಿದೆ. ಪೂರ್ವ ಪ್ರಾಥಮಿಕ ಶಾಲೆಯಿಂದ ಪಿಯುಸಿವರೆಗಿನ ಶಾಲೆಗಳು ಒಂದೇ ಕಂಪೌಂಡ್​ನಲ್ಲಿ ಇರುವುದಕ್ಕೆ ಪಬ್ಲಿಕ್ ಸ್ಕೂಲ್​ಯುಂದು ಕರೆಯುತ್ತಾರೆ.
ಆದರೆ, ಒಂದು ಕಡೆ ಪ್ರಾಥಮಿಕ ಶಾಲೆಗಳಿದ್ದರೆ, ಮತ್ತೊಂದೆಡೆ ಪಿಯು ಕಾಲೇಜುಗಳು ಇರುವುದಕ್ಕೂ ಸರ್ಕಾರ ಪಬ್ಲಿಕ್ ಶಾಲೆಯೆಂದು ನಾಮಕರಣ ಮಾಡುತ್ತಿರುವುದು ಸೋಜಿಗವಾಗಿದೆ ಎಂದರು.
ಶಿಕ್ಷಣ ಇಲಾಖೆ ಹದಗೆಟ್ಟು ಹೋಗಿದೆ. ಚಿತ್ರಕಲೆ ಪರೀಕ್ಷೆ ನಡೆಸದಂತೆ ಶಿಕ್ಷಣ ಇಲಾಖೆ ಇತ್ತೀಚೆಗೆ ಆದೇಶ ಹೊರಡಿಸಿದೆ. ಹಿಂದಿ ಭಾಷೆ ಕಲಿಯುವುದಕ್ಕೂ ಅಡ್ಡಿಪಡಿಸಲಾಗುತ್ತಿದೆ. ಹಿಂದಿ ಭಾಷೆ ದೇಶದ ಸಂವಹನ ಭಾಷೆಯಾಗಿದೆ ಎಂಬ ವಿಚಾರ ಸರ್ಕಾರಕ್ಕೆ ತಿಳಿದಿಲ್ಲವೇ ? ಎಂದು ಪ್ರಶ್ನಿಸಿದರು.
ಸರ್ಕಾರ ಶೀಘ್ರ ಅನುದಾನಿತ ಶಾಲಾ, ಕಾಲೇಜುಗಳಿಗೆ ಶಿಕ್ಷಕರನ್ನು ನೇಮಕಾತಿ ಮಾಡಿ, ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. 2006ರ ಏಪ್ರಿಲ್ 1ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ (ಒಪಿಎಸ್) ಜಾರಿಗೊಳಿಸಬೇಕು.
ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣಿನ ಅನುದಾನ ಹೆಚ್ಚಿಸಬೇಕು. ಅನುದಾನಿತ ಹಾಗೂ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಚಿತ್ರಕಲಾ, ಸಂಗೀತ, ಹೊಲಿಗೆ, ನಾಟಕ ಇನ್ನಿತರ ಹುದ್ದೆಗಳನ್ನು ತುಂಬಬೇಕು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಅನುದಾನಿತ ಶಾಲೆಗಳ ಮಕ್ಕಳಿಗೂ ಒದಗಿಸಬೇಕು ಎಂದು ಮನವಿ ಮಾಡಿದರು.
ಸಮಿತಿಯ ಸಂದೀಪ ಬೂದಿಹಾಳ, ಜಿ.ಆರ್. ಭಟ್ಟ, ಶ್ರೀನಿವಾಸ ಹುಯಿಲಗೋಳ, ಶಾಹೀನ ಬೇಗಂ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net