ಇದಕ್ಕೂ ಮೊದಲು ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ರುದ್ರಾಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದಿಪ ಶೆಟ್ಟರ್, ಸಂಸದ ಜಗದೀಶ ಶೆಟ್ಟರ್, ಇತರರು ಪಾಲ್ಗೊಳ್ಳುವರು ಎಂದರು.