ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ shops

shops ಹಳೇ ಹುಬ್ಬಳ್ಳಿಯ ಮಹಾನಗರ ಪಾಲಿಕೆ ಆಸ್ಪತ್ರೆ ಸುತ್ತ ಇದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು.
shops ಹಳೇ ಹುಬ್ಬಳ್ಳಿಯ ಮಹಾನಗರ ಪಾಲಿಕೆ ಆಸ್ಪತ್ರೆ ಸುತ್ತ ಇದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಹಳೇ ಹುಬ್ಬಳ್ಳಿಯ ಪಾಲಿಕೆ ಆಸ್ಪತ್ರೆ ಸುತ್ತ ಇದ್ದ ಕಟ್ಟಡಗಳ ನೆಲಸಮ
  • ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳು
  • ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿತ್ತು.
ಹುಬ್ಬಳ್ಳಿ :
ಅನಧಿಕೃತ ಅಂಗಡಿಗಳಿಂದಾಗಿ ಅಂಬ್ಯುಲೆನ್ಸ್ ಸೇರಿದಂತೆ ಇನ್ನಿತರ ವಾಹನಗಳು ಆಸ್ಪತ್ರೆಗೆ ಹೋಗಲು ದಾರಿ ಇರಲಿಲ್ಲ.
ಈ ಹಿನ್ನೆಲೆಯಲ್ಲಿ 2018ರಲ್ಲಿ ಅನಧಿಕೃತ ಅಂಗಡಿಗಳ ಮಾಲೀಕರಿಗೆ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಲು ಮಹಾನಗರ ಪಾಲಿಕೆ ಆಯುಕ್ತರು ನೋಟಿಸ್ ನೀಡಿದ್ದರು. 
ಆದರೆ, ಅಲ್ಲಿನ ವ್ಯಾಪಾರಸ್ಥರೆಲ್ಲ ಅಂಗಡಿಗಳನ್ನು ತೆರವುಗೊಳಿಸದಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಳ್ಳಲು ತಡೆಯಾಜ್ಞೆ ನೀಡಿತ್ತು.
8 ವರ್ಷಗಳಿಂದ ನಡೆದ ವಾದ, ವಿವಾದದ ನಂತರ ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಪಾಲಿಕೆ ಆಸ್ಪತ್ರೆಗೆ ಹೊಂದಿಕೊಂಡು ಅನಧಿಕೃತವಾಗಿ ಕಟ್ಟಿದ್ದ ಅಂಗಡಿಗಳ ತೆರವಿಗೆ ಬುಧವಾರ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಲಾಯಿತು. 
ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಬೆಳಗ್ಗೆಯೇ ಘಟನಾ ಸ್ಥಳಕ್ಕೆ ಹಾಜರಾಗಿ, ಅಲ್ಲಿನ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವ ಅಗತ್ಯತೆ ಬಗ್ಗೆ ತಿಳಿಹೇಳಿದರು. 
ಆದರೆ, ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಗಳು, ಯಾವುದೇ ಕಾರಣಕ್ಕೂ ಅಂಗಡಿಗಳನ್ನು ನೆಲಸಮಗೊಳಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. 
ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರಿಂದ ಬಿಗುವಿನ ವಾತಾವರಣ ನಿರ್ವಣಗೊಂಡಿತ್ತು. 
ಮಧ್ಯೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಗಳು, ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಕುರಿತು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.
ನಂತರ ಕೆಲ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿಯಲ್ಲಿನ ಹೂವು, ಹಣ್ಣು ಹಾಗೂ ಇನ್ನಿತರ ಸಾಮಗ್ರಿಗಳನ್ನು ತೆರವುಗೊಳಿಸಿದರು. ಆದರೂ, ಸ್ಥಳದಲ್ಲಿ ವ್ಯಾಪಾರಸ್ಥರ ವಿರೋಧ ಮುಂದುವರೆದೇ ಇತ್ತು. 
ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅಧಿಕಾರಿಗಳಿಗೆ ಸೂಚನೆ ನೀಡುತ್ತ ತೆರವು ಕಾರ್ಯಾಚರಣೆಯ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದರು. ಕಾರ್ಯಾಚರಣೆಗೆ ಅಡ್ಡಿಪಡಿಸಿದ ಕೆಲವರಿಗೆ ಪೊಲೀಸರು ಲಾಠಿ ರುಚಿಯನ್ನೂ ತೋರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net