ಎಬಿವಿಪಿಯಿಂದ ಪ್ರತಿಭಟನೆ

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿಯಿಂದ ಪ್ರತಿಭಟನೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿಯಿಂದ ಪ್ರತಿಭಟನೆ.
Published on
ಧಾರವಾಡ: ವಸತಿ ನಿಲಯದ ಸಮಸ್ಯೆಗಳನ್ನು ಸರಿಪಡಿಸಿ, ವಿದ್ಯಾರ್ಥಿಗಳಿಗೆ ಪೂರಕ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕಾರ್ಯದರ್ಶಿ ಸಚಿನ್ ಕೋಟ್ಯಾಳ್, ರಾಜ್ಯದಲ್ಲಿ ಹಿಂದುಳಿದ ಇಲಾಖೆಯ ವ್ಯಾಪ್ತಿಯಲ್ಲಿ 1,258 ಹಾಸ್ಟೆಲ್‌ಗಳಿದ್ದು, ಅದರಲ್ಲಿ 1,68, 833 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ವಾಸವಿದ್ದಾರೆ. ಆದರೆ, ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ವಸತಿಗೆ ನೀಡಬೇಕಾದ ಯಾವ ಸೌಲಭ್ಯಗಳನ್ನು ನೀಡುತ್ತಿಲ್ಲ. ಸಮರ್ಪಕ ಮತ್ತು ಗುಣಮಟ್ಟದ ಆಹಾರ ಸಹ ಪೂರೈಕೆ ಮಾಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತೊಂದರೆ ಪಡುವಂತಾಗಿದೆ ಎಂದು ದೂರಿದರು.
ಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 1,972 ವಸತಿ ನಿಲಯಗಳಿದ್ದು, 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಅವಕಾಶ ನೀಡಬಹುದಾಗಿದೆ. ಆದರೆ, ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳ ಸರ್ಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ ಕೇವಲ 40, 50 ವಿದ್ಯಾರ್ಥಿಗಳಿಗೆ ಮಾತ್ರ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಹೊರಗಡೆ ಬಾಡಿಗೆ ರೂಮ ಮಾಡಿಕೊಳ್ಳಬೇಕಿದೆ. ಹೀಗಾಗಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು ಮತ್ತು ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಾಗರಾಜ್ ಒಡೆಯರ್, ಅಭಿಷೇಕ ದೊಡಮನಿ, ಪ್ರಜ್ವಲ್ ಹೂಗಾರ, ಶೋಹನ ಮಲ್ಲಾಡದ, ವಿದ್ಯಾನಂದ ಎಸ್. ಇಗತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net