ಸಣ್ಣ ಕೈಗಾರಿಕೆಗಳು ತಮ್ಮ ಉತ್ಪಾದನಾ ವೆಚ್ಚವನ್ನು ನಿಭಾಯಿಸಲು ಕಷ್ಟಪಡಬೇಕಾಗುತ್ತದೆ
ಹುಬ್ಬಳ್ಳಿ : wage
ಕಾರ್ವಿುಕರ ಹಿತಾಸಕ್ತಿಯನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯೇ ಆಗಿದ್ದರೂ, ಏಕಾಏಕಿ ಮತ್ತು ಅತಿಯಾದ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ಮೇಲೆ ಭಾರಿ ಹೊರೆ ಆಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಕನಿಷ್ಠ ವೇತನವನ್ನು ಏರಿಕೆ ಮಾಡಿರುವ ಕ್ರಮದಿಂದ ಹೋಟೆಲ್ ಹಾಗೂ ಸಣ್ಣ ಉದ್ಯಮ ವಲಯಗಳಿಗೆ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ.
ಈಗಾಗಲೇ ವಿದ್ಯುತ್ ದರ ಏರಿಕೆ, ಇಂಧನ ಬೆಲೆ ಏರಿಕೆ, ಜಿಎಸ್ಟಿ ಭಾರ, ಕಚ್ಚಾ ವಸ್ತುಗಳ ಬೆಲೆ ಏರಿಕೆ, ಕಾರ್ವಿುಕರ ಕೊರತೆ, ಬ್ಯಾಂಕ್ ಬಡ್ಡಿದರ, ಸಾರಿಗೆ ವೆಚ್ಚ ಹಾಗೂ ತೆರಿಗೆ ಭಾರದಿಂದ ಕೈಗಾರಿಕೆಗಳು ಸಂಕಷ್ಟ ಅನುಭವಿಸುತ್ತಿವೆ ಎಂದು ತಿಳಿಸಿದ್ದಾರೆ.
ಕನಿಷ್ಠ ವೇತನದಲ್ಲಿ ಭಾರಿ ಪ್ರಮಾಣದ ಹೆಚ್ಚಳ ಮಾಡಿದರೆ ಅನೇಕ ಸಣ್ಣ ಕೈಗಾರಿಕೆಗಳು ತಮ್ಮ ಉತ್ಪಾದನಾ ವೆಚ್ಚವನ್ನು ನಿಭಾಯಿಸಲು ಕಷ್ಟಪಡಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಣ್ಣ ಹೋಟೆಲ್ಗಳು, ಬೇಕರಿಗಳು, ಟೀ ಅಂಗಡಿಗಳು, ಉಪಹಾರ ಗೃಹಗಳು ಮತ್ತು ಕುಟುಂಬ ಆಧಾರಿತ ಉದ್ಯಮಗಳು ಹೆಚ್ಚುವರಿ ವೇತನ ಭಾರವನ್ನು ಭರಿಸುವ ಸ್ಥಿತಿಯಲ್ಲಿ ಇಲ್ಲ.
ಇದರಿಂದ ಅನೇಕ ಉದ್ಯಮಿಗಳು ಸಿಬ್ಬಂದಿ ಕಡಿತ ಮಾಡುವ ಅಥವಾ ವ್ಯವಹಾರವನ್ನು ಮುಚ್ಚುವ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಎಂಎಸ್ಎಂಇ ವಲಯದಲ್ಲಿ ಸಾವಿರಾರು ಕೈಗಾರಿಕೆಗಳು ಕಡಿಮೆ ಲಾಭಾಂಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿ ವೇತನ ಭಾರದಿಂದ ಉದ್ಯೋಗ ಕಡಿತ, ಹೊಸ ನೇಮಕಾತಿ ಸ್ಥಗಿತ, ಉತ್ಪಾದನಾ ವೆಚ್ಚ ಏರಿಕೆ, ಸ್ಪರ್ಧಾತ್ಮಕ ಸಾಮರ್ಥ್ಯ ಕುಗ್ಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕಾರ್ವಿುಕರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಆದರೆ, ಉದ್ಯಮಗಳ ಆರ್ಥಿಕ ಸಾಮರ್ಥ್ಯವನ್ನು ಪರಿಗಣಿಸದೆ ಏಕಾಏಕಿ ವೇತನ ಹೆಚ್ಚಳ ಜಾರಿಗೊಳಿಸುವುದು ಸೂಕ್ತವಲ್ಲ.
ಸರ್ಕಾರವು ಹಂತ ಹಂತವಾಗಿ ಜಾರಿಗೊಳಿಸುವುದು, ಸಣ್ಣ ಉದ್ಯಮಗಳಿಗೆ ವಿಶೇಷ ವಿನಾಯಿತಿ ನೀಡುವುದು ಹಾಗೂ ತೆರಿಗೆ ಮತ್ತು ವಿದ್ಯುತ್ ದರಗಳಲ್ಲಿ ರಿಯಾಯಿತಿ ನೀಡುವ ಕುರಿತು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.
ಸರ್ಕಾರವು ಕೈಗಾರಿಕಾ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಬೇಕು, ಎಂಎಸ್ಎಂಇ ವಲಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಬೇಕು. ಹಂತ ಹಂತವಾಗಿ ವೇತನ ಪರಿಷ್ಕರಣೆ ಜಾರಿಗೆ ತರಬೇಕು. ಸಣ್ಣ ಕೈಗಾರಿಕೆಗಳಿಗೆ ಪ್ರೋೕತ್ಸಾಹಕ ಹಾಗೂ ತೆರಿಗೆ ರಿಯಾಯಿತಿ ನೀಡಬೇಕು ಎಂದು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.