ಗುಡಗೇರಿಯ ಆನಂದ ಬಸಪ್ಪ ಮುಂಡರಗಿ ಮೃತಪಟ್ಟ ಯುವಕ. ಈತ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ಯಾಂಕರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿ, ತೀವ್ರ ಗಾಯಗೊಂಡಿದ್ದ. ಕುಂದಗೋಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಹುಬ್ಬಳ್ಳಿ ಕೆಎಂಸಿಆರ್‌ಐಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾನೆ. ಕುಂದಗೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.