Road safety ಹುಬ್ಬಳ್ಳಿ ತಾಲೂಕಿನ ಅದರಗುಂಚಿಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆರ್ಟಿಒ ಶ್ರೀಕಾಂತ ಬಡಿಗೇರ, ಬಾಲಚಂದ್ರ ತೊದಲಬಾಗಿ, ಆಶಾಲತಾ ಕೋರಿಶೆಟ್ಟರ್, ಬಸವರಾಜ ಹೊಸಮನಿ, ಜಿ.ವಿ. ದಿನಮಣಿ ಇತರರು ಇದ್ದರು.
ಹುಬ್ಬಳ್ಳಿ: Road safety ತಾಲೂಕಿನ ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅತಿಥಿಯಾಗಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಕಾಂತ ಬಡಿಗೇರ ಮಾತನಾಡಿ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಉಪಯುಕ್ತ ಮಾಹಿತಿ ನೀಡಿದರು.
ಹಿರಿಯ ಮೋಟಾರು ವಾಹನ ನಿರೀಕ್ಷಕ ಬಾಲಚಂದ್ರ ತೊದಲಬಾಗಿ, ಮೋಟಾರು ವಾಹನ ನಿರೀಕ್ಷಕಿ ಆಶಾಲತಾ ಕೋರಿಶೆಟ್ಟರ್ ಮಾತನಾಡಿ, ವಿದ್ಯಾರ್ಥಿಗಳು ರಸ್ತೆ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಧಾರವಾಡ (ಪೂರ್ವ) ವತಿಯಿಂದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಕುರಿತು ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಶಾಲೆ ಪ್ರಾಂಶುಪಾಲ ಬಸವರಾಜ ಹೊಸಮನಿ ಮಾತನಾಡಿದರು. ಜಿ.ವಿ. ದಿನಮಣಿ ವಂದಿಸಿದರು.
ವಾಹನ ಚಾಲಕರಾದ ಅಬ್ದುಲ್ ಸಲಾಂ, ಶಂಕರ ಕಲಾಲ್, ರಾಜು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಭಾಗವಹಿಸಿದ್ದರು.