ಸೆಂಟ್ರಲ್ ಕ್ಷೇತ್ರದ ದೇವಸ್ಥಾನಗಳಿಗೆ 1 ಕೋಟಿ ರೂ. temples

temples ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು.
temples ಹು-ಧಾ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕರ ವಿಶೇಷ ಅನುದಾನದಡಿ ಅಭಿವೃದ್ಧಿ.
  • 20 ದೇವಸ್ಥಾನಗಳಿಗೆ ತಲಾ 5 ಲಕ್ಷ ರೂ.
  • ಹಿಂದೂ ದೇವಸ್ಥಾನಗಳಿಗೆ ಅನುದಾನ ಸಿಗುವುದು ವಿರಳ.
ಹುಬ್ಬಳ್ಳಿ: temples ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಆಯ್ದ 20 ದೇವಸ್ಥಾನಗಳಿಗೆ ತಲಾ 5 ಲಕ್ಷ ರೂ. ವಿಶೇಷ ಅನುದಾನ ವಿತರಿಸಿ, ಕೆಆರ್​ಡಿಎಲ್ ಏಜೆನ್ಸಿ ಮೂಲಕ ಕಾಮಗಾರಿ ಆರಂಭಿಸುವುದಾಗಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೆಂಟ್ರಲ್ ಕ್ಷೇತ್ರದ ವಿವಿಧ ದೇವಸ್ಥಾನಗಳ ಧರ್ಮದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದೂ ದೇವಸ್ಥಾನಗಳಿಗೆ ಅನುದಾನ ಸಿಗುವುದು ಬಹಳ ವಿರಳ. ಅನ್ಯಕೋಮಿನ ದೇವಸ್ಥಾನಗಳಿಗೆ ಅನುದಾನ ಹೋಗುವುದು ಸಾಮಾನ್ಯ. ಶಾಸಕರ ಅನುದಾನದಿಂದ ದೇವಸ್ಥಾನಗಳಿಗೆ ಸಣ್ಣ ಪುಟ್ಟ ಕೆಲಸಗಳನ್ನು ಮಾಡಿಸಲು ಅನುಕೂಲ ಅಗಲಿದೆ. ಪ್ರಥಮ ಹಂತದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಚೆಕ್ ಮೂಲಕ ಬಿಡುಗಡೆ ಮಾಡಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ಮತ್ತೆ ಇನ್ನುಳಿದ ದೇವಸ್ಥಾನಗಳಿಗೆ ಮಂಜೂರು ಮಾಡಿಸುವುದಾಗಿ ತಿಳಿಸಿದರು.
ದೇವಸ್ಥಾನಗಳ ಪರವಾಗಿ ಮಾತನಾಡಿದ ವಿಶ್ವೇಶ್ವರ ನಗರದ ಶನಿ ದೇವಸ್ಥಾನದ ಮುಖ್ಯ ಅರ್ಚಕ ಸಮೀರ್ ಆಚಾರ್ಯ, ಈಗಿನ ಸರ್ಕಾರ ದೇವಸ್ಥಾನ ಹುಂಡಿ ಹಣ ಬಳಸಿಕೊಳ್ಳುತ್ತಿದೆ. ಆದರೆ, ಶಾಸಕ ಮಹೇಶ ಟೆಂಗಿನಕಾಯಿ ಅವರು ದೇವಸ್ಥಾನಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿರುವುದು ಸ್ವಾಗತಾರ್ಹ ಎಂದರು.
ಮಾಜಿ ಮಹಾಪೌರ ವೀರಣ್ಣ ಸವಡಿ ಹಾಗೂ ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆಗೊಳಿಸಿದ್ದರು. ಇದೀಗ, ಸೆಂಟ್ರಲ್ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಶಾಸಕರು ಅನುದಾನ ಬಿಡುಗಡೆಗೊಳಿಸುತ್ತಿದ್ದಾರೆ ಎಂದು ಹೇಳಿದರು.
ಎ. ಸಿ. ಗೋಪಾಲ, ಅರವಿಂದ ನಗರದ ವೆಂಕಟೇಶ್ವರ ದೇವಸ್ಥಾನದ ಅಧ್ಯಕ್ಷ ಪಾಂಡುರಂಗ ಮುಷ್ಟಿ ಪಲ್ಲೆ ಹಾಗೂ ಇತರರು ಮಾತನಾಡಿದರು. ಉಪ ಮೇಯರ್ ಸಂತೋಷ ಚವ್ಹಾಣ, ಪಾಲಿಕೆಯ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಉಮೇಶಗೌಡ ಕೌಜಗೇರಿ, ರವಿ ನಾಯಕ, ರಾಮನಗೌಡ ಶೆಟ್ಟನಗೌಡ್ರು, ಈಶ್ವರಗೌಡ ಪಾಟೀಲ ಹಾಗೂ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net