ಧಾರವಾಡ: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರತ ಮತ್ತು ಗೌರವಯುತ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಿಂದ ಇದ್ದಾಗ ಮಾತ್ರ ಆತ್ಮಸ್ಥೆರ್ಯದಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಕಚೇರಿ ಮತ್ತು ಸಂಸ್ಥೆಗಳು ಸುರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಹಿಳೆಯರ ದೂರುಗಳನ್ನು ಗೌಪ್ಯವಾಗಿ ಸ್ವೀಕರಿಸಲು ಶೀ ಬಾಕ್ಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರು ತಮ್ಮ ಮೇಲೆ ನಡೆಯುವ ಅನ್ಯಾಯ, ಕಿರುಕುಳ ಅಥವಾ ದೌರ್ಜನ್ಯಗಳನ್ನು ಮೌನವಾಗಿ ಸಹಿಸಿಕೊಳ್ಳದೆ ಧೈರ್ಯವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಅಹಿತಕರ ಟನೆಗಳ ಬಗ್ಗೆ ದೂರು ದಾಖಲಿಸಲು ಮುಂದಾಗಬೇಕು ಎಂದರು.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಸರ್ಕಾರಿ, ಖಾಸಗಿ ಕಚೇರಿಗಳು ಮತ್ತು ಕೈಗಾರಿಕೆಗಳಲ್ಲಿ 10ಕ್ಕಿಂತ ಹೆಚ್ಚು ದುಡಿಯುವ ಮಹಿಳೆಯರು ಇದ್ದಲ್ಲಿ ಕಡ್ಡಾಯವಾಗಿ ಶೀ ಬಾಕ್ಸ್ ಅಳವಡಿಸಬೇಕು. ಅಲ್ಲಿನ ಮಹಿಳೆಯರು ತಮಗೆ ಲೈಂಗಿಕ ದೌರ್ಜನ್ಯ, ಕಿರುಕುಳ ಉಂಟಾದರೆ ಶೀ ಬಾಕ್ಸ್ನಲ್ಲಿ ಹಾಕಬೇಕು. ಅಥವಾ ಪೊಲೀಸ್ ಇಲಾಖೆಗೆ ತಿಳಿಸಬೇಕು. ದೂರು ನೀಡುವ ಮಹಿಳೆಯರ ಗೌಪ್ಯತೆ ಕಾಪಾಡಲಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಪ್ರಾಸ್ತಾಪವಾಗಿ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾ-ಕಾರಿ ಗುಂಜನ್ ಆರ್ಯ, ಜಿ.ಪಂ. ಉಪ ಕಾರ್ಯದಶಿರ್ ಮಲ್ಲಿಕಾರ್ಜುನ ತೊದಲಬಾಗಿ, ಆಯೋಗದ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ, ಸ್ಥಳಿಯ ದೂರು ನಿವಾರಣಾ ಸಮಿತಿಯ ಅಧ್ಯೆ ಡಾ. ಸಂಗೀತ ಮಾನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ-ಕಾರದ ಹಿರಿಯ ವಕೀಲೆ ಆಶಾ ಪ್ರಳಯಕಲ್ಮಠ ವೇದಿಕೆಯಲ್ಲಿದ್ದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅ-ಧಿಕಾರಿಗಳು ಮತ್ತು ಸಿಬ್ಬಂದಿ ಉಪಸಿತರಿದ್ದರು.