sanjeevini ayurveda ಬ್ಯಾಂಕಿಂಗ್ ವ್ಯವಹಾರ ಕಲಿಕೆ ಅಗತ್ಯ
ಹುಬ್ಬಳ್ಳಿಯ ಸಂಜೀವಿನಿ ಆಯುರ್ವೇದ sanjeevini ayurvedaವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳಿಗೆ ಶ್ರೇಷ್ಠತಾ ಪ್ರಶಸ್ತಿ ವಿತರಿಸಲಾಯಿತು.
ಹುಬ್ಬಳ್ಳಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿ ಸಹಯೋಗದೊಂದಿಗೆ ಇಲ್ಲಿಯ ಗೋಕುಲ ರಸ್ತೆಯ ಸಂಜೀವಿನಿ ಆಯುರ್ವೇದ sanjeevini ayurveda ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿದ್ಯಾರ್ಥಿ ಶ್ರೇಷ್ಠತಾ ಪ್ರಶಸ್ತಿ ವಿತರಣೆ ಮತ್ತು ವೈದ್ಯರ ದಿನಾಚರಣೆಯನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕ ದೊಡ್ಡ ರಂಗಪ್ಪ ಮಾತನಾಡಿ, ಯುವ ಪ್ರತಿಭೆಗಳನ್ನು ಸಂಸ್ಥೆಯು ಅತುತ್ತಮವಾಗಿ ಪೋಷಿಸುತ್ತಿದೆ. ಶಿಕ್ಷಣ, ಆರೋಗ್ಯ ಜತೆಗೆ ಬ್ಯಾಂಕ್ ಜ್ಞಾನ ಕೂಡ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದಂತೆ ಪೂರಕ ಮಾಹಿತಿ ನೀಡುವುದಾಗಿ ತಿಳಿಸಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕ-ಕೇಂದ್ರಿತ ಉತ್ಪನ್ನ ಮತ್ತು ಸೇವೆಗಳನ್ನು ಪ್ರದರ್ಶಿಸಿತು.
ಸಂಜೀವಿನಿ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಶ್ರೀನಿವಾಸ ಬನ್ನಿಗೋಳ, ಉಪ ಪ್ರಾಚಾರ್ಯ ಡಾ. ಮಹೇಶ ದೇಸಾಯಿ, ಕಾರ್ಯದರ್ಶಿ ಡಾ.ಎಸ್.ಎಸ್. ಹುದ್ದಾರ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಡಾ. ಅನ್ನಪೂರ್ಣ ಡಂಬಳ, ಇತರರಿದ್ದರು.