ಧಾರವಾಡ ಜಿಲ್ಲೆಯಲ್ಲಿ 648 ಸರ್ಕಾರಿ ಶಾಲೆಗಳಿವೆ. ಬಹುತೇಕ ಶಾಲೆಗಳು ಮೂಲ ಸೌಕರ್ಯಗಳಿಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಕಡೆ ವಿದ್ಯಾರ್ಥಿಗಳಿದ್ದರೆ ಅಲ್ಲಿ ಸಮರ್ಪಕ ಶಿಕ್ಷಕರು ಇಲ್ಲ, ಶಿಕ್ಷಕರಿರುವ ಹಲವು ಕಡೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಇದೆ. ಇಂತಹ ಸ್ಥಿತಿ ಮುಂದುವರಿದರೆ ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವುದು ಹೇಗೆ? ಎಂದು ಪ್ರಶ್ನಿಸಿದರು.