ಹಿರಿಯ ನಾಗರಿಕರ ಕ್ರೀಡಾಕೂಟ ಸಂಪನ್ನ

ಹುಬ್ಬಳ್ಳಿಯಲ್ಲಿ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜನೆ
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಕ್ರೀಡಾಕೂಟವನ್ನು ಮೇಯರ್​ ದುರ್ಗಮ್ಮ ಬೆಜವಾಡ ಗುಂಡು ಎಸೆಯುವ ಮೂಲಕ ಉದ್ಘಾಟಿಸಿದರು. ರಾಬರ್ಟ ದದ್ದಾಪುರಿ, ಮಹೇಂದ್ರ ಸಿಂಘಿ, ಬಿ.ಎ. ಪಾಟೀಲ, ಲಿಂಗರಾಜ ಅಂಗಡಿ ಇತರರು ಇದ್ದರು.
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ಕ್ರೀಡಾಕೂಟವನ್ನು ಮೇಯರ್​ ದುರ್ಗಮ್ಮ ಬೆಜವಾಡ ಗುಂಡು ಎಸೆಯುವ ಮೂಲಕ ಉದ್ಘಾಟಿಸಿದರು. ರಾಬರ್ಟ ದದ್ದಾಪುರಿ, ಮಹೇಂದ್ರ ಸಿಂಘಿ, ಬಿ.ಎ. ಪಾಟೀಲ, ಲಿಂಗರಾಜ ಅಂಗಡಿ ಇತರರು ಇದ್ದರು.
Published on: 

ಹುಬ್ಬಳ್ಳಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ರಾಜ್ಯ ಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಇಲ್ಲಿಯ ನೆಹರು ಮೈದಾನದಲ್ಲಿ ಹಿರಿಯ ಪುರುಷ ಹಾಗೂ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ಮೇಯರ್​ ದುರ್ಗಮ್ಮ ಬೆಜವಾಡ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಹಿರಿಯರು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ನೋಡುತ್ತಿದ್ದರೆ ನಮ್ಮ ಬಾಲ್ಯ ನೆನಪಾಗುತ್ತದೆ. ನಾವೂ ಕೂಡ ಕೆಲ ಆಟೋಟಗಳಲ್ಲಿ ಪಾಲ್ಗೊಂಡು ಖುಷಿಯಾಯಿತು. ಮಹಾನಗರ ಪಾಲಿಕೆಯಲ್ಲಿ ಹಿರಿಯರ ಸವಲತ್ತುಗಳು ಸುಲಭವಾಗಿ ಸಿಗುವಂತೆ ಮಾಡಲು ಸಮರ್ಪಕ ವ್ಯವಸ್ಥೆ ಮಾಡಲಾಗುವುದು ಎಂದರು.

ಅತಿಥಿಯಾಗಿದ್ದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಬರ್ಟ ದದ್ದಾಪುರಿ ಮಾತನಾಡಿ, ಹಿರಿಯ ನಾಗರಿಕರ ಭವನ ಕಟ್ಟಲು ಮುಂದಾದರೆ ಪ್ರಾಧಿಕಾರದಿಂದ ಸಿಎ ಸೈಟ್​ ನೀಡಲಾಗುವುದು ಹಾಗೂ ಹಿರಿಯ ನಾಗರಿಕರ ಸಮಸ್ಯೆ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹರಿಸುವ ಭರವಸೆ ನೀಡಿದರು.

ಮುಖಂಡ ಮಹೇಂದ್ರ ಸಿಂಘಿ ಮಾತನಾಡಿ, ತಾವು ಕೂಡ ಹಿರಿಯ ನಾಗರಿಕರಾಗಿದ್ದು, ಸಂದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಹಾಯ ಸಹಕಾರ ನೀಡುವುದಾಗಿ ಹೇಳಿದರು. ಆನಂದ ಭೂಮರಡ್ಡಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಬಿ.ಎ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಪಟುಗಳ ಪರೇಡ್​ ಪಥಸಂಚಲನ ನಂತರ ಕ್ರೀಡಾಕೂಟ ಸಮಾರೋಪ ನಡೆಯಿತು. ವಿಜೇತರನ್ನು ಘೋಷಣೆ ಮಾಡಿ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net