ಧಾರವಾಡ: ನಗರದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಸರ್ ಸಿದ್ದಪ್ಪ ಕಂಬಳಿ ಕಂಚಿನ ಪ್ರತಿಮೆ ಅನಾವರಣ ಸಮಾರಂಭ ಫೆ. 27ರಂದು ಮಧ್ಯಾಹ್ನ 12 ಗಂಟೆಗೆ ಆಯೋಜಿಸಲಾಗಿದೆ ಎಂದು ಸರ್ ಸಿದ್ದಪ್ಪ ಕಂಬಳಿ ಪ್ರತಿಷ್ಠಾನದ ಅಧ್ಯಕ್ಷ ಶಶಿಧರ ತೋಡಕರ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಮೆ ಅನಾವರಣಗೊಳಿಸುವರು. ಬಳಿಕ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಾಸಕ ಅರವಿಂದ ಬೆಲ್ಲದ, ಕವಿವಿಯ ಕುಲಪತಿ ಡಾ. ಎ.ಎಂ. ಖಾನ್ ಭಾಗವಹಿಸುವರು ಎಂದರು.
ಶಾಸಕ ಜಿ.ಎಸ್. ಪಾಟೀಲ, ಕರ್ನಾಟಕ ನೀರು ಸರಬರಾಜು-ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ಚಿತ್ರದುರ್ಗ ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ, ವಿಶ್ರಾಂತ ಕುಲಪತಿ ಎಚ್.ಬಿ. ವಾಲೀಕಾರ ಪಾಲ್ಗೊಳ್ಳುವರು ಎಂದರು.