ಸ್ನೇಹಲ್​ ನೂತನ ಜಿಲ್ಲಾಧಿಕಾರಿ

ಸ್ನೇಹಲ್​ ಆರ್​.
ಸ್ನೇಹಲ್​ ಆರ್​.
Published on
ಧಾರವಾಡ: ನೂತನ ಜಿಲ್ಲಾಧಿಕಾರಿಯನ್ನಾಗಿ ಸ್ನೇಹಲ್​ ಆರ್​. ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. 2013ರ ಐಎಎಸ್​ ಬ್ಯಾಚ್​ನ ಸ್ನೇಹಲ್​ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್​ನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಮೊದಲು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡ ದಿವ್ಯ ಪ್ರಭು ಅವರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ. ಕಳೆದ ಒಂದು ತಿಂಗಳಿಂದ ರಜೆ ಮೇಲಿದ್ದ ದಿವ್ಯ ಪ್ರಭು ಅವರ ಹುದ್ದೆಯ ಪ್ರಭಾರವನ್ನು ಜಿ.ಪಂ. ಸಿಇಒ ಭುವನೇಶ ಪಾಟೀಲ ಅವರಿಗೆ ವಹಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net