sports complex ಕ್ರೀಡಾ ಸಂಕೀರ್ಣ ಶೀಘ್ರ ಉದ್ಘಾಟನೆ

sports complex  ಹುಬ್ಬಳ್ಳಿಯಲ್ಲಿ ನಿರ್ಮಿಸಿದ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್​ ಜ್ಯೋತಿ ಪಾಟೀಲ, ಉಪಮೇಯರ್​ ಸಂತೋಷ ಚವ್ಹಾಣ, ಇತರರು ಇದ್ದರು.
sports complex ಹುಬ್ಬಳ್ಳಿಯಲ್ಲಿ ನಿರ್ಮಿಸಿದ ಸ್ಪೋರ್ಟ್ಸ್​ ಕಾಂಪ್ಲೆಕ್ಸ್​ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ. ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್​ ಜ್ಯೋತಿ ಪಾಟೀಲ, ಉಪಮೇಯರ್​ ಸಂತೋಷ ಚವ್ಹಾಣ, ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ಹುಬ್ಬಳ್ಳಿ: sports complex ಸ್ಮಾರ್ಟ್​ ಸಿಟಿ ಯೋಜನೆಯಡಿ ಗೋಕುಲ ರಸ್ತೆ ರಾಮ ಮನೋಹರ ಲೋಹಿಯಾನಗರದಲ್ಲಿ ನಿರ್ಮಿಸಿದ ಬೃಹತ್​ ಕ್ರೀಡಾ ಸಂಕೀರ್ಣಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪರಿಶೀಲನೆ ಮಾಡಿದರು.
ಕ್ರೀಡಾ ಸಂಕೀರ್ಣದಲ್ಲಿರುವ ಈಜುಗೊಳ, ಶೂಟಿಂಗ್​ ವಿಭಾಗ, ಬಾಸ್ಕೆಟ್​ ಬಾಲ್​, ಬ್ಯಾಡ್ಮಿಂಟನ್​ ಕೋರ್ಟ್​, ಕೇರಂ ವಿಭಾಗಗಳಿಗೆ ತೆರಳಿ ವೀಕ್ಷಣೆ ಮಾಡಿದರು. ಕೆಲಹೊತ್ತು ಬ್ಯಾಡ್ಮಿಂಟನ್​ ಆಡಿದರು.
ನಂತರ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಸ್ಮಾರ್ಟ್​ ಸಿಟಿ ಯೋಜನೆಯಡಿ 175 ಕೋಟಿ ರೂ. ವೆಚ್ಚದಲ್ಲಿ ಬೃಹತ್​ ಕ್ರೀಡಾ ಸಂಕೀರ್ಣ ನಿರ್ಮಾಣವಾಗಿದೆ. ಶೇ. 95ರಷ್ಟು ಕೆಲಸ ಪೂರ್ಣಗೊಂಡಿದೆ.
ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 12 ವರ್ಷ ಪೂರೈಸಿದ ಸಂದರ್ಭದಲ್ಲಿ ಅವರ ಸೂಚನೆ ಮೇರೆಗೆ ಸಾರ್ವಜನಿಕರಿಗೆ ಅನುಕೂಲಕರ ಯೋಜನೆಗಳನ್ನು ಪೂರ್ಣಗೊಳಿಸಲು ಭೇಟಿ ನೀಡಲಾಗಿದೆ. ಸಣ್ಣ ಪುಟ್ಟ ಕೆಲಸಗಳು ಬಾಕಿ ಇವೆ. ಶೀಘ್ರ ಅವನ್ನು ಪೂರ್ತಿ ಮಾಡಿ ಉದ್ಘಾಟನೆಗೆ ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ರಾಜ್ಯದ ಕ್ರೀಡಾ ಸಚಿವರ ಗಮನಕ್ಕೆ ತರಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಮಧ್ಯದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬೇಗ ಮುಗಿಯಲಿದೆ. ಭೂಸ್ವಾಧಿನ ಸೇರಿದಂತೆ ಕೆಲವು ತಾಂತ್ರಿಕ ಸಮಸ್ಯೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ಆಗಿಲ್ಲ. ಇದೀಗ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದರು.

ಕಸದಿಂದ ಇಂಧನ

ಹುಬ್ಬಳ್ಳಿಯಲ್ಲಿ ಘನತ್ಯಾಜ್ಯ ಸಂಸ್ಕರಿಸಿ ಹಸಿರು ಇಂಧನ ಅಥವಾ ಇದ್ದಿಲು ಉತ್ಪಾದಿಸುವ ಆತ್ಯಾಧುನಿಕ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದ್ದು, ಸುಮಾರು 28 ಕೋಟಿ ವೆಚ್ಚದಲ್ಲಿ ಸ್ಥಾಪನೆಯಾಗಲಿದೆ. ದೇಶದಲ್ಲಿ ವಾರಾಣಸಿ ಬಿಟ್ಟರೆ ಹುಬ್ಬಳ್ಳಿಯಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಇಲ್ಲಿ ಉತ್ಪಾದಿಸುವ ಇಂಧನಕ್ಕೆ ಇದ್ದಿಲು ಸ್ವರೂಪ ನೀಡಿ ಕೂಡಗಿ ಉಷ್ಣ ವಿದ್ಯುತ್​ ಸ್ಥಾವರಕ್ಕೆ ಕಳಿಸಲಾಗುತ್ತದೆ ಎಂದು ಸಚಿವ ಜೋಶಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ರೇಸ್​ನಲ್ಲಿ ನಾನಿಲ್ಲ. ರಾಜ್ಯದ ಬಗ್ಗೆ ಆಸಕ್ತಿಯೂ ಇಲ್ಲ. ಮೋದಿ ನೇತೃತ್ವದ ಸರ್ಕಾರದಲ್ಲಿ ಇದ್ದೇನೆ. ಬರ ಪರಿಸ್ಥಿತಿ ರಾಜ್ಯದಲ್ಲಿ ಇದ್ದು, ರಾಜ್ಯ ಸರ್ಕಾರ ಬೇಗ ಸಕ್ರಿಯವಾಗಬೇಕು. ಕೇಂದ್ರ ಸರ್ಕಾರ ಸಾಕಷ್ಟು ಆಹಾರ ಧಾನ್ಯ ಸಂಗ್ರಹಿಸಿದೆ. ಆದರೆ, ಜಾನುವಾರುಗಳಿಗೆ ನೀರು, ಮೇವು ಇತ್ಯಾದಿ ಪೂರೈಕೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net