ಬುಧವಾರ ಬೆಳಗ್ಗೆ 7.30ಕ್ಕೆ ಶ್ರೀ ಸದ್ಗುರುವಿಗೆ ರುದ್ರಾಭಿಷೇಕ ನಂತರ ಶ್ರೀ ಸತ್ಯನಾರಾಯಣ ಪೂಜೆ ಜರುಗುವುದು. ಮಧ್ಯಾಹ್ನ 12ರಿಂದ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರಿಂದ ಪಂ. ಪುಟ್ಟರಾಜ ಗವಾಯಿಗಳ ಶಿಷ್ಯರಿಂದ ದಿವ್ಯ ಭಕ್ತಿ ಸಂಗೀತ ಕಾರ್ಯಕ್ರಮ, ರಾತ್ರಿ 8.30ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಕಾರ್ಯಕ್ರಮ ಜರುಗಲಿದೆ.