ಉತ್ತರ ಕಲ್ಯಾಣ ಕರ್ನಾಟಕ (statehood) ರಾಜ್ಯ ರಚನೆಗೆ ಆಗ್ರಹ

ಪ್ರತ್ಯೇಕ ಉತ್ತರ (statehood) ಕಲ್ಯಾಣ ಕರ್ನಾಟಕ ರಾಜ್ಯ ರಚನೆಗೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಗುರುವಾರ ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮುಖಂಡರು, ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
ಪ್ರತ್ಯೇಕ ಉತ್ತರ (statehood) ಕಲ್ಯಾಣ ಕರ್ನಾಟಕ ರಾಜ್ಯ ರಚನೆಗೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಗುರುವಾರ ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮುಖಂಡರು, ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.
Published on
ಹುಬ್ಬಳ್ಳಿ: ಹದಿನಾರು ಜಿಲ್ಲೆಗಳನ್ನು (statehood) ಒಳಗೊಂಡು ಪ್ರತ್ಯೇಕ ಉತ್ತರ ಕಲ್ಯಾಣ ಕರ್ನಾಟಕ ರಾಜ್ಯ ರಚನೆಗೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ನಗರದಲ್ಲಿ ಗುರುವಾರ ಮೌನ ಪ್ರತಿಭಟನೆ, ಧರಣಿ ಸತ್ಯಾಗ್ರಹ ನಡೆಸಲಾಯಿತು.
ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಉತ್ತರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮುಖಂಡರು, ಕಾರ್ಯಕರ್ತರು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೊದಲಿಗೆ ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೆಲ ಹೊತ್ತು ಧರಣಿ ನಡೆಸಿದರು.
ಹೋರಾಟ ಸಮಿತಿ ಅಧ್ಯಕ್ಷ ಕುಮಾರ ಹಕಾರಿ ಮಾತನಾಡಿ, ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕವನ್ನು ಕಡೆಗಣಿಸಿವೆ. ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕೈಗಾರಿಕೆ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಉತ್ತರ ಕರ್ನಾಟಕ ವನ್ನು ನಿರ್ಲಕ್ಷಿಸಲಾಗಿದೆ. ಆದ್ದರಿಂದ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ 16 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯ ರಚನೆಗೆ ಸರ್ಕಾರ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
ನಮ್ಮ ಕೂಗು ಉತ್ತರ ಕಲ್ಯಾಣ ಕರ್ನಾಟಕ್ಕಾಗಿ, ನಮ್ಮ ಧ್ವನಿ ಪ್ರತ್ಯೇಕ ರಾಜ್ಯಕ್ಕಾಗಿ, ನಮಗೆ ಪ್ರತ್ಯೇಕ ರಾಜ್ಯ ಬೇಕೇ ಬೇಕು ಎಂಬಿತ್ಯಾದಿ ಘೊಷಣೆಗಳ ಫಲಕ ಹಿಡಿದಿದ್ದರು. ಸಮಿತಿಯ ಉಪಾಧ್ಯಕ್ಷ ಈರಪ್ಪ ಎಮ್ಮಿ, ಕಾರ್ಯದರ್ಶಿ ಕಿರಣ ರಡ್ಡೇರ, ಸಂಜೀವಗೌಡ ಮಾಳಗಿ, ಹರೀಶ ಗುಟ್ರಾಳ ಹಾಗೂ ವಕೀಲ ಶಿವರೆಡ್ಡಿ ರಡ್ಡೇಜ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net