ಸಕಾರಾತ್ಮಕ ಆಲೋಚನೆಯಿಂದ ಯಶಸ್ಸು ಸಾಧ್ಯ success

success ಹು-ಧಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಶೆಟ್ಟಿ ಅವರು ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅವರಿಂದ ಅಧಿಕಾರ ವಹಿಸಿಕೊಂಡರು.
success ಹು-ಧಾ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಶೆಟ್ಟಿ ಅವರು ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅವರಿಂದ ಅಧಿಕಾರ ವಹಿಸಿಕೊಂಡರು.
Published on

ಪ್ರಮುಖ ಮುಖ್ಯಾಂಶಗಳು

  • ಹು-ಧಾ ಬಂಟರ ಸಂಘದ ನೂತನ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಅಭಿಪ್ರಾಯ
  • ಸಂಘಕ್ಕೆ ಮಹಿಳಾ ಅಧ್ಯಕ್ಷರು ಆಯ್ಕೆಯಾಗಲಿ
  • ಬಂಟರ ಬಾಂಧವ್ಯ ಸಮಾರಂಭ
ಹುಬ್ಬಳ್ಳಿ :
ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ್ದ ಬಂಟರ ಬಾಂಧವ್ಯ ಸಮಾರಂಭದಲ್ಲಿ ಹು-ಧಾ ಬಂಟರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದರು.
ಆತ್ಮವಿಶ್ವಾಸ, ನಿರ್ದಿಷ್ಟ ಗುರಿ, ಸಾಧಿಸುವ ಛಲ ಹಾಗೂ ಸತತ ಪ್ರಾಮಾಣಿಕ ಪ್ರಯತ್ನದಿಂದ ಕನಸುಗಳು ನನಸಾಗಿಸುತ್ತವೆ ಎಂದರು.
ಅಧ್ಯಕ್ಷ ಸ್ಥಾನವನ್ನು ಅಧಿಕಾರದ ದೃಷ್ಟಿಯಿಂದ ಪರಿಗಣಿಸದೇ ಸಮಾಜದ ಸಂಘಟನೆಗೆ ಸಿಕ್ಕಿರುವ ಸದವಕಾಶವೆಂದು ಭಾವಿಸಿ, ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.
ಸಂಘದ ಚಟುವಟಿಕೆಗಳು ಹುಬ್ಬಳ್ಳಿಗೆ ಮಾತ್ರ ಸೀಮಿತವಾಗಬಾರದೆಂಬ ಉದ್ದೇಶದಿಂದ ಧಾರವಾಡದಲ್ಲಿ ಸಂಘದ ಭವನ ನಿರ್ವಿುಸುವ ಯೋಜನೆ ಇದೆ.
ಅವಶ್ಯಕತೆಗೆ ತಕ್ಕಂತೆ ಸಂಘದ ನಿಘಂಟಿನ ತಿದ್ದುಪಡಿಗೆ ಹಿರಿಯರ ಮಾರ್ಗದರ್ಶನ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.
ಸಂಘದ ಹಿರಿಯ ಸದಸ್ಯರಾದ ಶ್ರೀಕಾರ ಶೆಟ್ಟಿ ಮಾತನಾಡಿ, ಚುನಾವಣೆ ಇಲ್ಲದೇ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಸಂತಸಕರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಮಾಜಿ ಅಧ್ಯಕ್ಷ ಸತೀಶಚಂದ್ರ ಶೆಟ್ಟಿ ಮಾತನಾಡಿ, ಬಂಟರ ಸಂಘದಲ್ಲಿ ಪುರುಷರು ಮತ್ತು ಮಹಿಳೆಯರು ಎಂಬ ಬೇಧ ಇಲ್ಲ. ಇಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ಅವಕಾಶಗಳು ಇವೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಸಂಘಕ್ಕೆ ಮಹಿಳಾ ಅಧ್ಯಕ್ಷರು ಆಯ್ಕೆಯಾಗಲಿ ಎಂದು ಮಾಜಿ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಇದೇ ಸಂದರ್ಭದಲ್ಲಿ ಹಾರೈಸಿದರು.
ಸುಭಾಸಚಂದ್ರ ಶೆಟ್ಟಿ ಮಾತನಾಡಿ, ಹಿಂದಿನ ಪದಾಧಿಕಾರಿಗಳ ಆದರ್ಶ ಕಾಪಾಡಿಕೊಂಡು ಹೋಗಬೇಕಾದ ಜವಾಬ್ದಾರಿ ಇಂದಿನ ಪದಾಧಿಕಾರಿಗಳ ಮೇಲಿದೆ. ನಮ್ಮ ಸಮಾಜದ ಪರಂಪರೆ, ಸಂಸೃ್ಕಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದರು.
ನಿಕಟಪೂರ್ವ ಅಧ್ಯಕ್ಷ ವಿಜಯಾನಂದ ಶೆಟ್ಟಿ ಮಾತನಾಡಿದರು. ಇದಕ್ಕೂ ಮೊದಲು ಬಂಟ ಸಮಾಜದ ನೂತನ ದಂಪತಿಗಳನ್ನು ಸನ್ಮಾನಿಸಲಾಯಿತು.
ಸಂಘದ ನೂತನ ಕಾರ್ಯದರ್ಶಿ ರತ್ನಕಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ನೂತನ ಉಪಾಧ್ಯಕ್ಷರಾದ ಸುಧೀರ ಶೆಟ್ಟಿ, ಶ್ರೀನಿವಾಸ ಶೆಟ್ಟಿ, ಖಜಾಂಚಿ ದಿನೇಶ ಶೆಟ್ಟಿ, ಸಹ ಕಾರ್ಯದರ್ಶಿ ಜ್ಯೋತಿ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net